ಮೈಸೂರು: ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಸಾರ್ವಜನಿಕರ ಸಹಭಾಗಿತ್ವದ ಅಂಗವಾಗಿ ಹಮ್ಮಿಕೊಂಡಿರುವ ‘ವರ್ತುಲ ರಸ್ತೆ ಬೃಹತ್ ಸ್ವಚ್ಛತಾ ಅಭಿಯಾನ’ಕ್ಕೆ ಇಲ್ಲಿನ ದೊಡ್ಡಕೆರೆ ಮೈದಾನದಲ್ಲಿ ಅಧಿಕೃತವಾಗಿ ಚಾಲನೆ ನೀಡಲಾಯಿತು.

ಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸೀಫ್ ಮಾತನಾಡಿ, ‘ಸಾರ್ವಜನಿಕರು ಮತ್ತು ವಿವಿಧ ಸಂಸ್ಥೆಗಳು ಈ ಕಾರ್ಯದಲ್ಲಿ ಕೈಜೋಡಿಸಬೇಕು. ಪರಿಸರ ಸಂರಕ್ಷಣೆ ಮತ್ತು ನೈರ್ಮಲ್ಯದ ಬಗ್ಗೆ ಜಾಗೃತಿ ಮೂಡಿಸಬೇಕು’ ಎಂದು ಕೋರಿದರು.

ಎಸ್ಇ ಮಂಜು ಸಿ.ಎಸ್., ಕಾರ್ಯಪಾಲಕ ಎಂಜಿನಿಯರ್ಗಳಾದ ಮಧುಸೂದನ್, ಶ್ರೀನಿವಾಸ್, ಅಶ್ವಿನ್ ಹಾಗೂ ಮೃತ್ಯುಂಜಯ, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಮೀನಾಕ್ಷಿ, ನಾಗರಾಜೇಗೌಡ, ರವಿ, ವಲಯ ಆಯುಕ್ತೆ ಪ್ರತಿಭಾ ಹಾಗೂ ಅಭಿವೃದ್ಧಿ ಅಧಿಕಾರಿ ಸತ್ಯಮೂರ್ತಿ ಪಾಲ್ಗೊಂಡಿದ್ದರು.

ನಂತರ ವರ್ತುಲ ರಸ್ತೆಯಲ್ಲಿ ಸ್ವಚ್ಛತಾ ಕಾರ್ಯ ನಡೆಯಿತು. ಪಾಲಿಕೆಯ ಪರಿಸರ ಎಂಜಿನಿಯರ್ಗಳು, ಆರೋಗ್ಯ ನಿರೀಕ್ಷಕರು, ಸಹಾಯಕ ಹಾಗೂ ಕಿರಿಯ ಎಂಜಿನಿಯರ್ಗಳು ಮೇಲ್ವಿಚಾರಣೆ ನಡೆಸಿದರು. ವಾಹನ ವಿಭಾಗದ ಅಧಿಕಾರಿಗಳು, ಸಿಬ್ಬಂದಿ ಮತ್ತು ಚಾಲಕರು ಸಾಥ್ ನೀಡಿದರು. ವಿವಿಧ ಸರ್ಕಾರೇತರ ಸಂಸ್ಥೆಗಳು, ಶಾಲಾ– ಕಾಲೇಜು ವಿದ್ಯಾರ್ಥಿಗಳು ಮತ್ತು ನಾಗರಿಕ ಸಂಘ– ಸಂಸ್ಥೆಗಳ ಸದಸ್ಯರು ವರ್ತುಲ ರಸ್ತೆಯಲ್ಲಿ ಸ್ವಚ್ಛತಾ ಕಾರ್ಯ ನಡೆಸಿದರು.

ರಾತ್ರಿ ಸ್ವಚ್ಛತಾ ಕಾರ್ಯಕ್ಕೆ ಚಾಲನೆ:

ಮಹಾನಗರ ಪಾಲಿಕೆಯಿಂದ ರಾತ್ರಿ ವೇಳೆಯೂ ಸ್ವಚ್ಛತಾ ಕಾರ್ಯಕ್ಕೆ ಶುಕ್ರವಾರ ತಡರಾತ್ರಿಯಿಂದ ಅಧಿಕೃತವಾಗಿ ಚಾಲನೆ ನೀಡಲಾಯಿತು. ಅರಮನೆ ಕೋಟೆ ಆಂಜನೇಯ ದೇವಾಲಯದ ಆವರಣದಲ್ಲಿ ಆಯುಕ್ತ ಶೇಖ್ ತನ್ವೀರ್ ಆಸೀಫ್ ಚಾಲನೆ ನೀಡಿದರು.

ಪ್ರಾಯೋಗಿಕವಾಗಿ ಮೊದಲ ಹಂತದಲ್ಲಿ ನಗರದ ಪ್ರಮುಖ ಐದು ಆಯಕಟ್ಟಿನ ಸ್ಥಳಗಳಲ್ಲಿ ಸ್ವಚ್ಛತಾ ಕಾರ್ಯವನ್ನು ಯಶಸ್ವಿಯಾಗಿ ನಡೆಸಲಾಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260329-39-1957222390

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.