ಮೈಸೂರು: ನಗರದ ಯರಗನಹಳ್ಳಿಯ ಮಲೆ ಮಹದೇಶ್ವರ ರಸ್ತೆ ದಾಟುತ್ತಿದ್ದ ಮಹಿಳೆಗೆ ಗುರುವಾರ ದ್ವಿಚಕ್ರ ವಾಹನ ಡಿಕ್ಕಿಯಾಗಿ ಮೃತಪಟ್ಟಿದ್ದಾರೆ.

ವಿದ್ಯಾನಗರ ನಿವಾಸಿ ಮಹದೇವಮ್ಮ (75) ಮೃತರು. ಅವರು ಮಹದೇಶ್ವರ ರಸ್ತೆಯ ಪೂರ್ವಿಕಾ ಮೊಬೈಲ್ ಮಳಿಗೆ ಬಳಿಯಿಂದ ಟೆರಿಷಿಯನ್ ಕಾಲೇಜ್ ಕಡೆಗೆ ರಸ್ತೆ ದಾಟುತ್ತಿದ್ದರು. ಈ ವೇಳೆ ಯರಗನಹಳ್ಳಿ ವೃತ್ತದಿಂದ ಗಿರಿಯಾಭೋವಿ ಪಾಳ್ಯದತ್ತ ವೇಗವಾಗಿ ಬಂದ ಪ್ರೇಮ್ ಕುಮಾರ್ ಅವರು ಡಿಕ್ಕಿ ಹೊಡೆದಿದ್ದಾರೆ. ಕೆಳಗೆ ಬಿದ್ದ ಮಹದೇವಮ್ಮ ತಲೆಗೆ ಬಲವಾದ ಗಾಯಗಳಾಗಿದ್ದು, ಆಸ್ಪತ್ರೆಗೆ ಕರೆದೊಯ್ದಾಗ ವೈದ್ಯರು ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ’ ಎಂದು ಪೊಲೀಸರು ತಿಳಿಸಿದರು. ಸಿದ್ದಾರ್ಥನಗರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿದ್ಯುತ್ ಸ್ಪರ್ಶಿಸಿ ಬಾಲಕ ಸಾವು: ಮನೆಯೊಳಗೆ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ವಿದ್ಯುತ್ ಸ್ಪರ್ಶಿಸಿ ಮಂಡಿ ಮೊಹಲ್ಲಾದ ಕೈಲಾಸಪುರಂ ನಿವಾಸಿ ಮೊಹಮ್ಮದ್ ಅಲಿ (7) ಮೃತಪಟ್ಟಿದ್ದಾನೆ.

‘ಅಲಿ ಅವರ ತಂದೆ ಮೊಹಮ್ಮದ್ ಕರೀಂ ಅವರ ಸಂಬಂಧಿಕರ ಮದುವೆ ಭಾನುವಾರ ನಿಗದಿಯಾಗಿದ್ದು, ಇದಕ್ಕೆ ಪೂರಕವಾದ ಕಾರ್ಯಕ್ರಮವೊಂದನ್ನು ಮನೆಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಮನೆಯೊಳಗೆ ಆಟವಾಡುತ್ತಿದ್ದ ಮೊಹಮ್ಮದ್ ಅಲಿಗೆ ಆಕಸ್ಮಿಕವಾಗಿ ವಿದ್ಯುತ್ ಸ್ಪರ್ಶಿಸಿದೆ’ ಎಂದು ಪೊಲೀಸರು ತಿಳಿಸಿದರು. ಮಂಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260404-39-815594626

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.