ಬೆಟ್ಟದಪುರ: ಮಕ್ಕಳು ವಿದ್ಯೆಯನ್ನು ಕಷ್ಟಪಟ್ಟು ಕಲಿಯದೆ ಇಷ್ಟಪಟ್ಟು ಕಲಿತು ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಬೇಕು. ವಿದ್ಯೆ ಕಲಿತ ಶಾಲೆಗೆ ಮತ್ತು ಶಿಕ್ಷಕರಿಗೆ ಗೌರವ ತರುವಂತಹ ಕೆಲಸ ಮಾಡಬೇಕೆಂದು ಒಕ್ಕಲಿಗ ಯುವ ಬ್ರಿಗೇಡ್ ಸಂಸ್ಥಾಪಕ ಅಧ್ಯಕ್ಷ ನಂಜೇಗೌಡ ನಂಜುಂಡ ಹೇಳಿದರು.

ಸಮೀಪದ ದೊಡ್ಡನೇರಳೆ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಗೆ ಶನಿವಾರ ವೈಯಕ್ತಿಕವಾಗಿ ಎಲ್.ಇ.ಡಿ ಟಿವಿ ನೀಡಿ ಮಾತನಾಡಿದ ಅವರು, ಸರ್ಕಾರಿ ಶಾಲೆಗಳು ಉಳಿದರೆ ಮಾತ್ರ ಬಡಮಕ್ಕಳಿಗೆ ಶಿಕ್ಷಣ ಕೊಡಲು ಸಾಧ್ಯ. ಖಾಸಗೀಕರಣದಿಂದ, ಅಧಿಕಾರಿಗಳ ನಿರ್ಲಕ್ಷ್ಯತನದಿಂದ ಸರ್ಕಾರಿ ಶಾಲೆಗಳು ಅವನತಿಯ ಅಂಚಿನಲ್ಲಿವೆ. ಸರ್ಕಾರ, ಅಧಿಕಾರಿಗಳು, ಶಿಕ್ಷಕರು ಮತ್ತು ಪಾಲಕರು ಜಾಗೃತಿ ವಹಿಸಿದರೆ ಸರ್ಕಾರಿ ಶಾಲೆ ಉಳಿಸಬಹುದು. ಖಾಸಗಿ ಶಾಲೆಗೆ ಹೋಲಿಕೆ ಮಾಡಿದರೆ ಸರ್ಕಾರಿ ಶಾಲೆಯಲ್ಲಿ ಉತ್ತಮ ಬೋಧಕರು ಇದ್ದಾರೆ. ಹಾಗಾಗಿ ಸರ್ಕಾರಿ ಶಾಲೆಯನ್ನು ಉಳಿಸಲು ಪ್ರತಿಯೊಬ್ಬರ ಸಹಕಾರ ಪ್ರಮುಖವಾಗಿದೆ ಎಂದರು.

ಶಾಲೆಯ ಮುಖ್ಯಶಿಕ್ಷಕ ವಸಂತ್, ಶಿಕ್ಷಕಿ ನಿರ್ಮಲಾ, ಉಪನ್ಯಾಸಕ ದರ್ಶನ, ಮುಖಂಡ ರಾಜೇಗೌಡ, ಡಿ.ಜೆ. ರಮೇಶ್, ನಟೇಶ್, ವಾಸು, ರಾಜೇಗೌಡ, ಸ್ವಾಮಿಗೌಡ, ಆನಂದ್, ಗಣೇಶ್, ಅಂಗನವಾಡಿ ಕಾರ್ಯಕರ್ತೆ ಲತಾ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.