ಮೈಸೂರು: ‘ಯುವಜನರು ಟೈಲರಿಂಗ್ನಂತಹ ವೃತ್ತಿಪರ ತರಬೇತಿ ಪಡೆಯುವ ಮೂಲಕ ಸ್ವ ಉದ್ಯೋಗದೊಂದಿಗೆ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಬಹುದು’ ಎಂದು ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ.ರಾಮಪ್ಪ ಸಲಹೆ ನೀಡಿದರು.

ನಗರದ ವಿದ್ಯಾರಣ್ಯಪುರಂನಲ್ಲಿರುವ ಕೌಶಲ ಕರ್ನಾಟಕ ತರಬೇತಿ ಕೇಂದ್ರದಲ್ಲಿ ಮಂಗಳವಾರ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ವತಿಯಿಂದ ಹಮ್ಮಿಕೊಂಡಿದ್ದ ಜಿಲ್ಲೆಯ ಪರಿಶಿಷ್ಟ ಜಾತಿ ಭೋವಿ ಜನಾಂಗದ ನಿರುದ್ಯೋಗ ಯುವಜನರಿಗೆ ಉಚಿತ ಟೈಲರಿಂಗ್ ತರಬೇತಿಗೆ ಚಾಲನೆ ನೀಡಿ ಮಾತನಾಡಿದರು.

‘ಜಿಲ್ಲೆಯ ಪರಿಶಿಷ್ಟ ಜಾತಿ ಭೋವಿ ಜನಾಂಗದ ನಿರುದ್ಯೋಗಿ ಮಹಿಳೆಯರಿಗೆ ಟೈಲರಿಂಗ್ ತರಬೇತಿ ಶಿಬಿರ ಇಂದಿನಿಂದ ಆರಂಭವಾಗಿದೆ. 75 ಮಹಿಳೆಯರಿಗೆ ತರಬೇತಿ ನೀಡಿ, ಉಚಿತವಾಗಿ ಹೊಲಿಗೆ ಯಂತ್ರ ನೀಡಲಾಗುವುದು’ ಎಂದರು.

‘ಮಹಿಳೆಯರು ಸ್ವ ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡಬೇಕು. ಇದಕ್ಕೆ ಅವಶ್ಯವಾದ ತರಬೇತಿ ಹಾಗೂ ಆರ್ಥಿಕ ನೆರವಿಗಾಗಿ ಸರ್ಕಾರದ ವಿವಿಧ ಯೋಜನೆಗಳನ್ನು ಬಳಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.

ಚಿತ್ರದುರ್ಗದ ಭೋವಿ ಸಮುದಾಯ ಮಠದ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ, ನಿಗಮದ ಮಾಜಿ ಅಧ್ಯಕ್ಷ ಸೀತಾರಾಮ್, ಪಾಲಿಕೆ ಮಾಜಿ ಸದಸ್ಯ ಮಾ.ವಿ.ರಾಮ್ ಪ್ರಸಾದ್, ತರಬೇತಿ ಕೇಂದ್ರದ ನಿವೇದಿತಾ ಕಿರಣ್, ಸ್ವಯಂ ಸೇವಾ ಸಂಸ್ಥೆಯ ಬಲರಾಂ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260506-39-1177047104

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.