ಮೈಸೂರು: ನಗರದ ಹಾರ್ಡಿಂಜ್ ವೃತ್ತದ ಬಳಿ ಇರುವ ಸೋಮೇಶ್ವರನಾಥ ದೇಗುಲದ ಆವರಣದಲ್ಲಿ ಏ. 26ರಂದು ಸಿದ್ಧಲಿಂಗೇಶ್ವರಸ್ವಾಮಿಗಳ 23ನೇ ವಾರ್ಷಿಕೋತ್ಸವವು ಅದ್ದೂರಿಯಾಗಿ ನಡೆಯಲಿದೆ.

ಮೈಸೂರಿನಲ್ಲಿ 26 ವರ್ಷದ ಹಿಂದೆ ಎಡೆಯೂರು ಸಿದ್ಧಲಿಂಗೇಶ್ವರ ಶ್ರೀಗಳ ಮೂರ್ತಿ ಪ್ರತಿಷ್ಠಾಪನೆಯಾದ ನೆನಪಿನಲ್ಲಿ ಸಿದ್ಧಲಿಂಗೇಶ್ವರಸ್ವಾಮಿ ಸಮಿತಿ ಟ್ರಸ್ಟ್ ಪ್ರತಿ ವರ್ಷ ಕಾರ್ಯಕ್ರಮ ಆಯೋಜಿಸುತ್ತಿದೆ. ಕೋವಿಡ್ ಕಾರಣಕ್ಕೆ ಕಳೆದೆರಡು ವರ್ಷ ಕಾರ್ಯಕ್ರಮ ನಡೆದಿರಲಿಲ್ಲ. ಹೀಗಾಗಿ ಇದು 23ನೇ ವಾರ್ಷಿಕೋತ್ಸವ.

‘ಎಡೆಯೂರಿನಿಂದ ಪ್ರಸಾದದ ಮೂಲಕ ತಂದ ಸಿದ್ಧಲಿಂಗೇಶ್ವರರ ಮೂರ್ತಿಗೆ ಸೋಮೇಶ್ವರನ ಸನ್ನಿಧಿಯಲ್ಲಿ ಸ್ಥಳಾವಕಾಶ ನೀಡಿದ್ದು ಎಂ.ಪಿ. ಶಂಕರ್. ಅಂದಿನಿಂದ ಈ ದೇಗುಲದಲ್ಲಿ ನಿತ್ಯ ಪೂಜೆ, ಪ್ರತಿ ಅಮಾವಾಸ್ಯೆಯಂದು ವಿಶೇಷ ಪೂಜೆ ಮೊದಲಾದ ಕಾರ್ಯಗಳು ನಡೆದಿವೆ’ ಎನ್ನುತ್ತಾರೆ ಟ್ರಸ್ಟ್ನ ಅಧ್ಯಕ್ಷ ಎಚ್.ಎಸ್. ವೀರೇಶ್.

ಭಾನುವಾರ ಬೆಳಿಗ್ಗೆ 11ಕ್ಕೆ ನಡೆಯಲಿರುವ ವೇದಿಕೆ ಕಾರ್ಯಕ್ರಮದ ಸಾನ್ನಿಧ್ಯವನ್ನು ಸಿದ್ಧಗಂಗಾ ಮಠದ ಕಿರಿಯ ಶ್ರೀ ಶಿವಸಿದ್ದೇಶ್ವರ ಸ್ವಾಮೀಜಿ, ಬೇಬಿಮಠದ ತ್ರಿನೇತ್ರ ಮಹಾಂತ ಸ್ವಾಮೀಜಿ ವಹಿಸಲಿದ್ದಾರೆ. ಕೇಂದ್ರ ಸಚಿವ ವಿ. ಸೋಮಣ್ಣ ಉದ್ಘಾಟಿಸಲಿದ್ದು, ಟ್ರಸ್ಟ್ನ ಗೌರವ ಅಧ್ಯಕ್ಷ ಎಸ್.ಸಿ. ಅಶೋಕ್ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಶಾಸಕರು ಪಾಲ್ಗೊಳ್ಳಲಿದ್ದಾರೆ.

ಸಂಜೆ 5ಕ್ಕೆ ಸಿದ್ಧಲಿಂಗೇಶ್ವರರ ಪಲ್ಲಕ್ಕಿ ಉತ್ಸವವು ವಿವಿಧ ಕಲಾತಂಡಗಳೊಂದಿಗೆ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಲಿದೆ.

ದೇಗುಲ ನಿರ್ಮಾಣ: ‘ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದ ವೇಳೆ ಜೆ.ಪಿ. ನಗರದಲ್ಲಿ ಟ್ರಸ್ಟ್ಗೆ 1 ಎಕರೆ, 6 ಗುಂಟೆ ಜಾಗ ನೀಡಿದ್ದರು. ಅಲ್ಲಿ ₹4 ಕೋಟಿ ವೆಚ್ಚದಲ್ಲಿ ಭವ್ಯ ದೇವಸ್ಥಾನ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ. ಜೊತೆಗೆ ಬಡ ವಿದ್ಯಾರ್ಥಿಗಳಿಗಾಗಿ ಉಚಿತ ವಿದ್ಯಾರ್ಥಿನಿಲಯ ಹಾಗೂ ಪ್ರಸಾದ ನಿಲಯವನ್ನು ನಿರ್ಮಿಸುವ ಉದ್ದೇಶವಿದೆ’ ಎನ್ನುತ್ತಾರೆ ಎಚ್.ಎಸ್. ವೀರೇಶ್.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260426-39-323463884

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.