ನಂಜನಗೂಡು: ‘ಮೈಸೂರಿನ ಕಲಾಮಂದಿರದಲ್ಲಿ ಮೇ 6ರಂದು ಶಿವಯೋಗಿ ಸಿದ್ಧರಾಮೇಶ್ವರ ಜಯಂತಿ ಆಚರಣೆ ರಾಜ್ಯಮಟ್ಟದ ಸಮಾರಂಭ ಹಮ್ಮಿಕೊಳ್ಳಲಾಗಿದ್ದು, ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು’ ಎಂದು ಭೋವಿ ಗುರುಪೀಠದ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಕೋರಿದರು.

ತಾಲ್ಲೂಕಿನ ದೇವಿರಮ್ಮನಹಳ್ಳಿ ಪಾಳ್ಯ ಗ್ರಾಮದಲ್ಲಿ ನಡೆದ ಸಭೆಯಲ್ಲಿ ಅವರು ಮಾತನಾಡಿದರು.

‘12ನೇ ಶತಮಾನದ ಬಸವಣ್ಣನವರ ಸಮಕಾಲೀನರಾಗಿದ್ದ ಸಿದ್ದರಾಮೇಶ್ವರರು, ಕಾಯಕವೇ ಕೈಲಾಸ ತತ್ವದ ಅಡಿಯಲ್ಲಿ ಕೆರೆ– ಕಟ್ಟೆಗಳನ್ನು ನಿರ್ಮಿಸಿ ಜನಸೇವೆ ಆರಂಭಿಸಿದರು. ಸಮಾಜದ ಸುಧಾರಣೆಗೆ ಶ್ರಮಿಸಿದ ಕಾಯಕಯೋಗಿಗೆ ನಮನ ಸಲ್ಲಿಸಲು ಜಯಂತಿ ನಡೆಸಲಾಗುತ್ತಿದೆ. ಮೆರವಣಿಗೆ, ಉಪನ್ಯಾಸ ಹಾಗೂ ವಿಶೇಷ ಪೂಜೆ ಜರುಗಲಿದೆ’ ಎಂದರು.

ಸನ್ಮಾನ ಸ್ವೀಕರಿಸಿದ ಶಾಸಕ ದರ್ಶನ್ ಧ್ರುವನಾರಾಯಣ, ‘ಭೋವಿ ಜನಾಂಗವನ್ನು ಅಭಿವೃದ್ಧಿಪಡಿಸುವನಿಟ್ಟಿನಲ್ಲಿ ಕಾಂಗ್ರೆಸ್ ಸರ್ಕಾರ ಭೋವಿ ನಿಗಮ ಸ್ಥಾಪಿಸಿ ಅನುದಾನ ನೀಡಿ ನೆರವಾಗುತ್ತಿದೆ. ಕ್ಷೇತ್ರದಲ್ಲಿ ಸುಸಜ್ಜಿತ ಭೋವಿ ಸಮುದಾಯ ಭವನ ನಿರ್ಮಾಣಕ್ಕಾಗಿ ನಂಜನಗೂಡು ನಗರದ ಚಾಮರಾಜನಗರ ಬೈಪಾಸ್ ರಸ್ತೆಯಲ್ಲಿ ಈಗಾಗಲೇ ಏಳು ಗುಂಟೆ ಜಾಗ ನೀಡಲಾಗಿದೆ. ₹ 50 ಲಕ್ಷ ಅನುದಾನ ಮಾಡಲಾಗಿದೆ. ದೇವಿರಮ್ಮನಹಳ್ಳಿಪಾಳ್ಯದಲ್ಲಿ ಹಲವು ಅಭಿವೃದ್ಧಿ ಕಾರ್ಯನಡೆಸಲಾಗಿದೆ’ ಎಂದು ಹೇಳಿದರು.

ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮ ಮಾಜಿ ಅಧ್ಯಕ್ಷ ಎಸ್.ಸಿ.ಬಸವರಾಜು, ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ.ರಾಮಪ್ಪ, ಮಾಜಿ ಅಧ್ಯಕ್ಷ ಜಿ.ವಿ. ಸೀತಾರಾಮು, ಸಮಾಜದ ಜಿಲ್ಲಾ ಅಧ್ಯಕ್ಷ ವಿಜಯ್ ಕುಮಾರ್, ಮುಖಂಡರಾದ ಪಾಪಣ್ಣ, ಕಗ್ಗಲಿಪುರ ಮಹದೇವು, ಬಾಲಾಜಿ, ವಸಂತ ಕುಮಾರ್, ಕಾಳಪ್ಪ, ತಿಮ್ಮರಸು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260504-38-1788235801

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.