ಮೈಸೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಶಿವಯೋಗಿ ಸಿದ್ಧರಾಮೇಶ್ವರ ಜಯಂತ್ಯುತ್ಸವ ಸಮಿತಿ ಹಾಗೂ ಭೋವಿ ಹಿತರಕ್ಷಣಾ ಸಮಿತಿಯಿಂದ ಮೇ 6ರಂದು ಬೆಳಿಗ್ಗೆ 10.30ಕ್ಕೆ ಕಲಾಮಂದಿರದಲ್ಲಿ ಶಿವಯೋಗಿ ಸಿದ್ಧರಾಮೇಶ್ವರ ಜಯಂತಿ ಆಯೋಜಿಸಲಾಗಿದೆ ಎಂದು ರಾಜ್ಯ ಭೋವಿ ಅಭಿವೃದ್ದಿ ನಿಗಮದ ಅಧ್ಯಕ್ಷ ಎಂ.ರಾಮಪ್ಪ ತಿಳಿಸಿದರು.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕಾರ್ಯಕ್ರಮದಲ್ಲಿಪ್ರೊ.ಎಸ್.ಜಿ.ಸಿದ್ದರಾಮಯ್ಯ ಅವರಿಗೆ ಕಾಯಕಯೋಗಿ ಸಿದ್ಧರಾಮೇಶ್ವರ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಭೋವಿ ಗುರುಪೀಠದ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಸಿಎಂ ಸಿದ್ದರಾಮಯ್ಯ ಉದ್ಘಾಟಿಸುವರು. ಶಾಸಕ ಕೆ.ಹರೀಶ್ಗೌಡ ಅಧ್ಯಕ್ಷತೆ ವಹಿಸುವರು’ ಎಂದರು.

ಭೋವಿ ನಿಗಮದ ಮಾಜಿ ಅಧ್ಯಕ್ಷ ಸೀತಾರಾಮು, ಎಸ್.ವಿಜಯಕುಮಾರ್, ರವಿಪೂಜಾರಿ, ಮಲ್ಲಣ್ಣ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260506-39-1060352450

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.