ಮೈಸೂರು: ತಾಲ್ಲೂಕಿನ ಕಡಕೊಳ ಕೈಗಾರಿಕಾ ಪ್ರದೇಶದಲ್ಲಿ ಶೇಷಾದ್ರಿಪುರಂ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಎಸ್ಐಟಿ) ನೂತನ ಕಟ್ಟಡಗಳನ್ನು ಸೋಮವಾರ ಸುತ್ತೂರು ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಮತ್ತು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ವಿದ್ಯಾಶಂಕರ್ ಉದ್ಘಾಟಿಸಿದರು.

ವಿದ್ಯಾಶಂಕರ್ ಮಾತನಾಡಿ, ‘ರಾಜ್ಯದಲ್ಲಿ ಗುಣಮಟ್ಟದ ತಾಂತ್ರಿಕ ಶಿಕ್ಷಣ ಸಿಗುತ್ತಿದೆ. ಇಂಟರ್ನ್ಶಿಪ್, ಕೈಗಾರಿಕಾ ಸಹಭಾಗಿತ್ವ ಹಾಗೂ ನವೀನ ಅಧ್ಯಯನ ವಿಧಾನಗಳನ್ನು ಅಳವಡಿಸಿಕೊಳ್ಳಲಾಗಿದೆ. ಕೃತಕ ಬುದ್ಧಿಮತ್ತೆ, ಮಷಿನ್ ಲರ್ನಿಂಗ್ ಸೇರಿದಂತೆ ಆಧುನಿಕ ತಂತ್ರಜ್ಞಾನಗಳನ್ನು ವಿಷಯವಾಗಿ ಕಲಿಸಲಾಗುತ್ತಿದೆ’ ಎಂದು ಹೇಳಿದರು.

ಶೇಷಾದ್ರಿಪುರಂ ಶಿಕ್ಷಣ ಸಂಸ್ಥೆಯ ಗೌರವ ಕಾರ್ಯದರ್ಶಿ ನಾಡೋಜ ವೂಡೆ ಪಿ. ಕೃಷ್ಣ, ‘ಸಂಸ್ಥೆಯು 34 ಶೈಕ್ಷಣಿಕ ಸಂಸ್ಥೆಗಳನ್ನು ನಿರ್ವಹಿಸುತ್ತಿದ್ದು, 1500 ಅಧ್ಯಾಪಕರು ಹಾಗೂ 26 ಸಾವಿರ ವಿದ್ಯಾರ್ಥಿಗಳಿದ್ದಾರೆ. ಎಸ್ಐಟಿ ಕ್ಯಾಂಪಸ್ 10 ಎಕರೆ ಪ್ರದೇಶದಲ್ಲಿ ತಲೆ ಎತ್ತಿದ್ದು, ಸಮಗ್ರ ತಾಂತ್ರಿಕ ಶಿಕ್ಷಣ ನೀಡುವ ಗುರಿ ಹೊಂದಿದೆ’ ಎಂದರು.

ಟ್ರಸ್ಟ್ ಅಧ್ಯಕ್ಷ ಎನ್.ಆರ್.ಪಂಡಿತ್ ಆರಾಧ್ಯ ಮಾತನಾಡಿ, ‘ವಿದ್ಯಾರ್ಥಿಗಳು ತಂತ್ರಜ್ಞಾನದ ಜೊತೆಗೆ ಸಂಸ್ಕೃತಿಯನ್ನೂ ಅಳವಡಿಸಿಕೊಳ್ಳಬೇಕು’ ಎಂದರು.

ರಾಮಕೃಷ್ಣ ಆಶ್ರಮದ ಸ್ವಾಮಿ ಮುಕ್ತಿದಾನಂದ, ಎಂ.ಎಸ್.ನಟರಾಜ್ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260324-39-1294901895

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.