ಮೈಸೂರು: ‘ಮನುಷ್ಯ ಹಸಿವಿನಲ್ಲಿದ್ದಾಗ ಭಗವಂತ ಯಾವುದಾದರೂ ರೂಪದಲ್ಲಿ ಅನ್ನ ಕೊಡುತ್ತಾನೆ. ಅದಕ್ಕೆ ಪ್ರತಿಯಾಗಿ ನಾವು ಸಮಾಜಕ್ಕೆ ಕೊಡುಗೆ ನೀಡದಿದ್ದರೆ ಬದುಕಿಗೆ ಅರ್ಥವಿಲ್ಲ’ ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ವಿ.ಬಸವರಾಜು ಹೇಳಿದರು.

ನಗರದ ದೊಡ್ಡಕೆರೆ ಮೈದಾನದ ಬಳಿಯ ಸೋಮೇಶ್ವರ ದೇವಸ್ಥಾನದ ಆವರಣದಲ್ಲಿ ಸಿದ್ದಲಿಂಗೇಶ್ವರ ಸ್ವಾಮಿ ಯುವಕ ಮಂಡಳಿ, ಸಿದ್ದಲಿಂಗೇಶ್ವರ ಸ್ವಾಮಿ ಮಹಿಳಾ ಮಂಡಳಿಯ ಸಹಯೋಗದಲ್ಲಿ ಭಾನುವಾರ ನಡೆದ ಸಿದ್ದಲಿಂಗೇಶ್ವರಸ್ವಾಮಿ 23ನೇ ವಾರ್ಷಿಕೋತ್ಸವದಲ್ಲಿ ಅವರು ಮಾತನಾಡಿದರು.

‘ಸಮಾಜದಿಂದ ಅನುಕೂಲ ಪಡೆದವರು ಸಮಾಜದ ಅಭಿವೃದ್ಧಿಗೆ ಏನಾದರೂ ಕೊಡುಗೆ ನೀಡಬೇಕು. ಆಗ ಮಾತ್ರ ಮನುಷ್ಯ ಜನ್ಮ ಸಾರ್ಥಕ ಆಗುತ್ತದೆ’ ಎಂದರು.

‘ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾಗ ಜೆ.ಪಿ.ನಗರದಲ್ಲಿ ಸಿದ್ದಲಿಂಗೇಶ್ವರ ಸ್ವಾಮಿ ದೇವಸ್ಥಾನಕ್ಕೆ ನಿವೇಶನ ದೊರೆಯಿತು. ದೇವಸ್ಥಾನ ನಿರ್ಮಾಣ ನಡೆದಿದ್ದು, ಸಮುದಾಯದವರು ಸಹಕಾರ ನೀಡಬೇಕು’ ಎಂದು ಕೋರಿದರು.

ಮಹಾಸಭಾ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಧನ್ಯಾ ಸತ್ಯೇಂದ್ರ ಮೂರ್ತಿ ‘ದೇವಸ್ಥಾನದ ಉದ್ಘಾಟನೆಗೆ ಸಮುದಾಯದವರು ಕೈಜೋಡಿಸಬೇಕು’ ಎಂದು ಕೋರಿದರು.

ಶ್ರೀರಂಗಪಟ್ಟಣದ ಚಂದ್ರವನ ಆಶ್ರಮದ ತ್ರೀನೇತ್ರ ಮಹಾಂತ ಶಿವಯೋಗಿ ಸ್ವಾಮೀಜಿ, ಸಿದ್ದಲಿಂಗೇಶ್ವರ ಸ್ವಾಮಿ ಸಮಿತಿ ಟ್ರಸ್ಟ್ನ ಗೌರವ ಅಧ್ಯಕ್ಷ ಎಸ್.ಸಿ.ಅಶೋಕ್, ಅಧ್ಯಕ್ಷ ಎಚ್.ಎಸ್. ವೀರೇಶ್, ಪ್ರಧಾನ ಕಾರ್ಯದರ್ಶಿ ಆರ್. ಸ್ವಾಮಿ, ಮುಖಂಡರಾದ ಬಿ.ವಿ.ಮಂಜುನಾಥ, ನಂದೀಶ್, ಕಲ್ಯಾಣ್, ಸುನೀಲ್, ಕೈಲಾಸ್, ಪ್ರದೀಪ್, ದೀಪಕ್, ರವಿ, ರಾಜೇಶ್, ಮಂಜುನಾಥ್, ಚಂದನ್, ಪ್ರವೀಣ್, ಪ್ರಮೋದ್ ಇದ್ದರು.

ವಾರ್ಷಿಕೋತ್ಸವ ಅಂಗವಾಗಿ ಬೆಳಿಗ್ಗೆಯಿಂದ ದೇಗುಲದಲ್ಲಿ ವಿವಿಧ ಪೂಜಾ ಕಾರ್ಯಗಳು ನಡೆದವು. ಸಾವಿರಾರು ಭಕ್ತರು ಭೇಟಿ ನೀಡಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260427-39-271820777

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.