ಮೈಸೂರು: ‘ಪರಮಾತ್ಮನ ಧ್ಯಾನದಿಂದ ಮೋಕ್ಷ ಸಾಧ್ಯ’ ಎಂದು ಘೋಡಗೇರಿ ಶಿವಾನಂದ ಮಠದ ಮಲ್ಲಯ್ಯ ಸ್ವಾಮೀಜಿ ಹೇಳಿದರು.

ಸುತ್ತೂರು ಮಠದಲ್ಲಿ ಶಿವರಾತ್ರೀಶ್ವರ ಧಾರ್ಮಿಕ ದತ್ತಿ ಹಾಗೂ ಜೆಎಸ್ಎಸ್ ಮಹಾವಿದ್ಯಾಪೀಠದಿಂದ ಆಯೋಜಿಸಿದ್ದ ನಿಜಗುಣ ಶಿವಯೋಗಿಗಳ ವಿವೇಕ ಚಿಂತಾಮಣಿ ಕೃತಿ ಕುರಿತು ಮಠಾಧಿಪತಿಗಳು, ಮಾತಾಜಿಗಳು, ಆಧ್ಯಾತ್ಮಿಕ ಜಿಜ್ಞಾಸುಗಳು ಹಾಗೂ ಸಾಧಕರ ಅಧ್ಯಯನ ಶಿಬಿರದಲ್ಲಿ ಉಪನ್ಯಾಸ ನೀಡಿದರು.

‘ಜಗತ್ತಿಗೆ ದೇವರೇ ಆಶ್ರಯದಾತ. ಲೋಕವನ್ನು ನಡೆಸುತ್ತಿರುವ ಅವನೇ ಸೃಷ್ಟಿ, ಸ್ಥಿತಿ, ಲಯಕ್ಕೆ ಕಾರಣ. ವಿವೇಕ ಚಿಂತಾಮಣಿ ಕೃತಿಯು ಈ ಬಗ್ಗೆ ಮಾಹಿತಿ ಒದಗಿಸುತ್ತದೆ’ ಎಂದರು.

ನಿವೃತ್ತ ಪ್ರಾಧ್ಯಾಪಕ ಕೆ.ಅನಂತರಾಮು ಅವರು, ‘ಬದುಕು ಪಾಪ ಪುಣ್ಯಗಳ ಫಲ. ಸದ್ಗುರು ಭಕ್ತನನ್ನು ಕತ್ತಲಿಂದ ಜ್ಞಾನವೆಂಬ ಬೆಳಕಿನ ಕಡೆಗೆ ಕರೆದೊಯ್ಯುತ್ತಾನೆ’ ಎಂದು ಹೇಳಿದರು.

ಯೋಗಗುರು ಕೆ.ರಾಘವೇಂದ್ರ ಪೈ, ‘ಯೋಗ ಮತ್ತು ಧ್ಯಾನದಿಂದ ದೇಹ ಮತ್ತು ಮನಸ್ಸನ್ನು ಶಾಂತಗೊಳಿಸಬಹುದು. ಜೀವನದಲ್ಲಿ ದೈವಿಕತೆ ಹೊಂದಬಹುದು’ ಎಂದರು.

ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-38-1360341555

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.