ಮೈಸೂರು: ನಗರದ ಸರಸ್ವತಿಪುರಂನ ಕೃಷ್ಣಧಾಮದಲ್ಲಿ ಮೇ 18ರಿಂದ 20ರವರೆಗೆ ಶ್ರೀಕೃಷ್ಣ ಮಿತ್ರ ಮಂಡಳಿಯ 50ನೇ ಸುವರ್ಣ ಸಂಭ್ರಮಾಚರಣೆ ಹಮ್ಮಿಕೊಳ್ಳಲಾಗಿದೆ ಎಂದು ಕೃಷ್ಟ ಟ್ರಸ್ಟ್ ಉಪಾಧ್ಯಕ್ಷ ರವಿಶಾಸ್ತ್ರಿ ಹೇಳಿದರು.

ಇಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 18ರಂದು ಸಂಜೆ 5.30ಕ್ಕೆ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಮಂತ್ರಾಲಯ ರಾಘವೇಂದ್ರಸ್ವಾಮಿ ಮಠದ ಪೀಠಾಧಿಪತಿ ಸುಭುಧೇಂದ್ರತೀರ್ಥ ಸ್ವಾಮೀಜಿ, ಉಡುಪಿ ಪೇಜಾವರ ಮಠದ ಪೀಠಾಧಿಪತಿ ವಿಶ್ವ ಪ್ರಸನ್ನತೀರ್ಥ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಅತಿಥಿಗಳಾಗಿ ಶಾಸಕ ಟಿ.ಎಸ್.ಶ್ರೀವತ್ಸ ಭಾಗವಹಿಸುವರು ಎಂದರು. ಪತ್ರಕರ್ತ ರವೀಂದ್ರ ಜೋಶಿ ಅವರಿಗೆ ‘ಶ್ರೀಕೃಷ್ಣಾನುಗ್ರಹ’ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಸಂಜೆ 7ಕ್ಕೆ ಪುತ್ತೂರು ಜಗದೀಶ್ ಆಚಾರ್ಯ ಮತ್ತು ತಂಡದವರಿಂದ ‘ಭಕ್ತಿ ಸುಧೆ’ ನಡೆಯಲಿದೆ ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-36-1517830627

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.