ಶುಕ್ರವಾರ, 19 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಎಸ್‌ಎಸ್‌ಎಲ್‌ಸಿ ಪರೀಕ್ಷೆ–2: 445 ವಿದ್ಯಾರ್ಥಿಗಳು ಗೈರು

Published 14 ಜೂನ್ 2024, 15:14 IST
Last Updated 14 ಜೂನ್ 2024, 15:14 IST
ಅಕ್ಷರ ಗಾತ್ರ

ಮೈಸೂರು: ನಗರದಲ್ಲಿ ಶುಕ್ರವಾರ ಆರಂಭವಾದ ಎಸ್‌ಎಸ್‌ಎಲ್‌ಸಿ ಪರೀಕ್ಷೆ–2ರಲ್ಲಿನ ಪ್ರಥಮ ಭಾಷೆ ವಿಷಯಕ್ಕೆ 2,535 ವಿದ್ಯಾರ್ಥಿಗಳು ಹಾಜರಾಗಿದ್ದು, 445 ವಿದ್ಯಾರ್ಥಿಗಳು ಗೈರು ಹಾಜರಾದರು.

257 ಪುನರಾವರ್ತಿತ ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 2,980 ವಿದ್ಯಾರ್ಥಿಗಳು ಪ್ರಥಮ ಭಾಷೆ ಪರೀಕ್ಷೆಗೆ ನೋಂದಾಯಿಸಿದ್ದರು.

ಜಿಲ್ಲೆಯಲ್ಲಿ ಗ್ರಾಮೀಣ ಭಾಗದ 10 ಹಾಗೂ ನಗರದ 7 ಕೇಂದ್ರಗಳು ಸೇರಿದಂತೆ ಒಟ್ಟು 17 ಕೇಂದ್ರಗಳಲ್ಲಿ ಪರೀಕ್ಷೆ ನಡೆದವು. ಈ ಮೊದಲು ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಂತೆಯೇ ಎಲ್ಲೆಡೆಯೂ ಸಿಸಿಟಿವಿ ಕ್ಯಾಮೆರಾ ಅಳವಡಿಸಿದ್ದು, ಕಟ್ಟುನಿಟ್ಟಾಗಿ ಪರೀಕ್ಷೆಯನ್ನು ನಡೆಸಲಾಯಿತು.

ಡಿಡಿಪಿಐ ಎಚ್‌.ಕೆ.ಪಾಂಡು ನೇತೃತ್ವದ ತಂಡವೂ ನಗರ ಹಾಗೂ ತಿ.ನರಸೀಪುರದ ಕೇಂದ್ರಗಳಿಗೆ ಭೇಟಿ ನೀಡಿ ಸುಗಮವಾಗಿ ಪರೀಕ್ಷೆ ನಡೆಯುತ್ತಿರುವ ಬಗ್ಗೆ ಪರಿಶೀಲನೆ ನಡೆಸಿತು.

‘ಪರೀಕ್ಷೆಯು ಸುಗಮವಾಗಿ ನಡೆದಿದ್ದು, ಎಲ್ಲೂ ನಕಲು ಹಾಗೂ ಅಹಿತಕರ ಘಟನೆಗಳು ನಡೆದಿಲ್ಲ’ ಎಂದು ಇಲಾಖೆ ಅಧಿಕಾರಿಗಳು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT