ಮೈಸೂರು: ಕಬ್ಬು ಬೆಳೆಗಾರರಿಗೆ ರಾಜ್ಯ ಸರ್ಕಾರ ನಿಗದಿ ಮಾಡಿರುವ ಹೆಚ್ಚುವರಿ ₹ 100 ಪಾವತಿ ಮಾಡಲು ಒತ್ತಾಯಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ, ರಾಜ್ಯ ಕಬ್ಬು ಬೆಳೆಗಾರರ ಸಂಘದ ಸದಸ್ಯರು ನಗರದ ಜಿಲ್ಲಾಧಿಕಾರಿ ಕಚೇರಿಗೆ ಮುಂಭಾಗ ಆರಂಭಿಸಿದ್ದ ಅಹೋರಾತ್ರಿ ಧರಣಿಯನ್ನು ಬುಧವಾರ ತಾತ್ಕಾಲಿಕವಾಗಿ ಮುಂದೂಡಲಾಯಿತು.

ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರೈತ ಮುಖಂಡರು ಜಿಲ್ಲಾಧಿಕಾರಿ ಕಚೇರಿ ಮುಂಭಾಗವೇ ಹೋರಾಟಕ್ಕೆ ಕುಳಿತರು. ಅಲ್ಲೇ ಮಲಗಿ ಆಕ್ರೋಶ ವ್ಯಕ್ತಪಡಿಸಿದರು. ಸ್ಥಳಕ್ಕೆ ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಆಗಮಿಸಿ ಪ್ರತಿಭಟನಕಾರರ ಅಹವಾಲು ಆಲಿಸಿದರು.

ಸಂಘಟನೆ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಮಾತನಾಡಿ, ‘ಸರ್ಕಾರದ ಎಲ್ಲಾ ಆದೇಶಗಳಿಗೂ ಕಾರ್ಖಾನೆಯವರು ತಡೆಯಾಜ್ಞೆ ತರುತ್ತಾರೆ. ಈ ರೀತಿಯಾದರೆ ರೈತರಿಗೆ ನ್ಯಾಯ ಹೇಗೆ ಸಿಗುತ್ತದೆ. ನ್ಯಾಯಾಲಯದಲ್ಲಿ ಒಬ್ಬ ನ್ಯಾಯಾಧೀಶರು ಮೂರು ತಿಂಗಳ ಹಿಂದೆ ಇದೇ ಆದೇಶಕ್ಕೆ ಸಂಬಂಧಿಸಿದಂತೆ ತಡೆಯಾಜ್ಞೆ ನೀಡುವುದಿಲ್ಲ ಎಂದರು. ಅದೇ ನ್ಯಾಯಾಲಯದ ಮತ್ತೊಬ್ಬ ನ್ಯಾಯಾಧೀಶರು ಈ ಆದೇಶಕ್ಕೆ ತಡೆಯಾಜ್ಞೆ ನೀಡಿದ್ದಾರೆ. ಈ ರೀತಿ ಆದರೆ ರೈತರಿಗೆ ನ್ಯಾಯ ಕೊಡುವವರು ಯಾರು’ ಎಂದು ಪ್ರಶ್ನಿಸಿದರು.

‘ಕಬ್ಬಿಗೆ ಸರ್ಕಾರ ಘೋಷಣೆ ಮಾಡಿರುವ ಹೆಚ್ಚುವರಿ ₹ 100 ರಲ್ಲಿ ಸರ್ಕಾರ ನೀಡಬೇಕಾದ ₹ 50 ಅನ್ನು ಏ. 29 ರ ಒಳಗಾಗಿ ರೈತರ ಖಾತೆಗೆ ಜಮಾ ಮಾಡಲಾಗುವುದು’ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಭರವಸೆ ನೀಡಿದರು. ಬಳಿಕ ಧರಣಿಯನ್ನು ತಾತ್ಕಾಲಿಕವಾಗಿ ಮುಂದೂಡಲಾಯಿತು.

ಕಬ್ಬಿಗೆ ರಾಜ್ಯ ಸರ್ಕಾರ ಹೆಚ್ಚುವರಿ ನೂರು ರೂಪಾಯಿ ನಿಗದಿ ಮಾಡಿ ಸಕ್ಕರೆ ಕಾರ್ಖಾನೆಗಳು ₹50 ಸರ್ಕಾರದಿಂದ ₹50 ಪಾವತಿಸಬೇಕೆಂದು ಆದೇಶ ಮಾಡಿತ್ತು. ಆದರೆ ದಕ್ಷಿಣ ಭಾರತ ಸಕ್ಕರೆ ಕಾರ್ಖಾನೆಗಳ ಒಕ್ಕೂಟದವರು ಸರ್ಕಾರದ ಆದೇಶದ ವಿರುದ್ಧ ಉಚ್ಚ ನ್ಯಾಯಾಲಯದಲ್ಲಿ ತಡೆಯಾಜ್ಞೆ ತಂದಿರುವ ಕಾರಣ ಪ್ರಕರಣ ತೀರ್ಮಾನವಾಗುವವರೆಗೆ ಹಣ ಪಾವತಿ ಸಾಧ್ಯವಿಲ್ಲ ಎಂದು ಕಾರ್ಖಾನೆಯವರು ತಿಳಿಸಿದ್ದಾರೆ. ಆದರೆ ಸರ್ಕಾರದ ವತಿಯಿಂದ ಪಾವತಿಸಬೇಕಾದ ಟನ್ಗೆ ₹50 ರೈತರ ಖಾತೆಗೆ 29ರ ಒಳಗಾಗಿ ಜಮಾ ಮಾಡುವುದಾಗಿ ಜಿಲ್ಲಾಧಿಕಾರಿ ಭರವಸೆ ನೀಡಿದ ಕಾರಣ ತಾತ್ಕಾಲಿಕವಾಗಿ ಎರಡನೇ ದಿನದ ಚಳವಳಿಯನ್ನು ನಿಲ್ಲಿಸಲಾಯಿತು.

ಸಂಘಟನೆಯ ಪದಾಧಿಕಾರಿಗಳಾದ ಅತ್ತಹಳ್ಳಿ ದೇವರಾಜ್, ಬರಡನಪುರ ನಾಗರಾಜ್, ಕಿರಗಸೂರು ಶಂಕರ್, ಸೋಮಶೇಖರ್, ಮಾರ್ಬಳ್ಳಿ ನೀಲ ಕಂಠಪ್ಪ, ವರಕೋಡು ನಾಗೇಶ್, ಕುರುಬೂರು ಸಿದ್ದೇಶ್, ಲಕ್ಷ್ಮೀಪುರ ವೆಂಕಟೇಶ್, ಕೆಂಡಗಣಪ್ಪ, ಪ್ರಸಾದ್ ನಾಯಕ, ಮಹದೇವ ಸ್ವಾಮಿ, ನಾಗೇಶ್, ಬಸವರಾಜ, ಮಹಾದೇವು, ನಾಗೇಂದ್ರ, ಅಂಬಳೆ ಮಂಜುನಾಥ್, ಸುನೀಲ್, ಜಯರಾಮು, ನಂಜುಂಡಸ್ವಾಮಿ, ಶಿವಣ್ಣ, ಬಾಲು, ಸತೀಶ್, ಕಮಲಮ್ಮ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260423-39-1787719320

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.