ಮೈಸೂರು: ‘ಕೇಂದ್ರ ಸರ್ಕಾರವು ಒಂದು ಟನ್ ಕಬ್ಬಿಗೆ ₹ 3,650 ಎಫ್ಆರ್ಪಿ ಬೆಲೆ ನಿಗದಿಪಡಿಸಿದ್ದು ನ್ಯಾಯಸಮ್ಮತವಾಗಿಲ್ಲ. ಇದು ರೈತರ ಉತ್ಪಾದನಾ ವೆಚ್ಚಕ್ಕಿಂತ ಕಡಿಮೆ’ ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಅತ್ತಹಳ್ಳಿ ದೇವರಾಜ್ ದೂರಿದ್ದಾರೆ.

‘ರಾಜ್ಯ ಸರ್ಕಾರವು ಕಬ್ಬು ಉತ್ಪಾದನಾ ವೆಚ್ಚವನ್ನು ₹ 4, 450ಕ್ಕೆ ನಿಗದಿ ಮಾಡಬೇಕೆಂದು ಕೇಂದ್ರಕ್ಕೆ ವರದಿ ನೀಡಿದೆ. ಆದರೆ ಕೇಂದ್ರ ಸರ್ಕಾರ ಇದನ್ನು ಪುರಸ್ಕರಿಸಿಲ್ಲ. ಇದು ರೈತರನ್ನು ಕಬ್ಬು ಬೆಳೆಯಿಂದ ಒಕ್ಕಲೆಬ್ಬಿಸುವ ಕಾರ್ಯ. ಆದ್ದರಿಂದ ಕೂಡಲೇ ಎಫ್ಆರ್ಪಿ ದರ ಪುನರ್ ಪರಿಶೀಲಿಸಬೇಕು. ಕಬ್ಬಿನಿಂದ ಸಕ್ಕರೆ, ಎಥನಾಲ್, ವಿದ್ಯುತ್, ಕಾಂಪೋಸ್ಟ್ ಗೊಬ್ಬರ ಮುಂತಾದ ಉತ್ಪನ್ನಗಳನ್ನು ಉತ್ಪಾದಿಸುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ನಿರಂತರವಾಗಿ ವಂಚನೆ ಮಾಡುತ್ತಿವೆ. ಸರ್ಕಾರದ ಆದೇಶಗಳನ್ನು ವಾಮ ಮಾರ್ಗದಲ್ಲಿ ನಿರ್ಲಕ್ಷಿಸುತ್ತಿವೆ. ಕಬ್ಬಿನ ಹಣ ಪಾವತಿ ಸಕಾಲಕ್ಕೆ ಸಮರ್ಪಕವಾಗಿ ಮಾಡುತ್ತಿಲ್ಲ. ಇಂತಹ ವಿಚಾರದಲ್ಲಿ ಕೇಂದ್ರ ಸರ್ಕಾರ ಸಕ್ಕರೆ ನಿಯಂತ್ರಣ ಕಾಯ್ದೆ 1966 ತಿದ್ದುಪಡಿ ಮಾಡಿ ಕಾನೂನು ಉಲ್ಲಂಘಿಸುವ ಕಾರ್ಖಾನೆ ಮಾಲೀಕರಿಗೆ ಶಿಕ್ಷೆ ವಿಧಿಸುವ ಕಠಿಣ ಕಾಯ್ದೆ ಜಾರಿಗೆ ತರಬೇಕು’ ಎಂದು ಒತ್ತಾಯಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-39-89305491

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.