ತಿ.ನರಸೀಪುರ: ‘ಭಕ್ತಿ ಭಯದಿಂದಲ್ಲ, ಪ್ರೀತಿ ಯಿಂದ ಬರಬೇಕು. ಆಗ ಮಾತ್ರ ಭಗವಂತನಿಗೆ ಸಲ್ಲುತ್ತದೆ’ ಎಂದು ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಹೇಳಿದರು.

ತಾಲ್ಲೂಕಿನ ಮಾಡ್ರಹಳ್ಳಿಯ ಪಟ್ಟದ ಮಠದ ಆವರಣದಲ್ಲಿ ಚನ್ನಮಲ್ಲಿಕಾರ್ಜುನ ಸ್ವಾಮೀಜಿಗಳ ಸುವರ್ಣ ಪುಣ್ಯ ಸ್ಮರಣೋತ್ಸವದ ಅಂಗವಾಗಿ ಗುರುವಾರ ನಡೆದ ಧಾರ್ಮಿಕ ಸಭೆಯ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.

‘ಭಗವಂತನಿಗೂ ಮನುಷ್ಯನಿಗೂ ಭಕ್ತಿ ಮಾರ್ಗದ ಮೂಲಕ ಒಂದು ಅವಿನಾಭಾವ ಸಂಬಂಧವಿರುತ್ತದೆ. ಭಯದಿಂದ ತೋರುವ ಭಕ್ತಿ ಭಗವಂತನಿಗೆ ಅರ್ಪಣೆಯಾಗುವುದಿಲ್ಲ. ಪ್ರೀತಿಯಿಂದ ತೋರುವ ಭಕ್ತಿ ಭಗವಂತನಿಗೆ ಸಲ್ಲಿಕೆಯಾಗುತ್ತದೆ. ಮನಸ್ಸು ಭಕ್ತಿಯ ಮೂಲಕ ಭಗವಂತನಲ್ಲಿ ಮಾತನಾಡುತ್ತದೆ. ಹೀಗಾಗಿ ಪ್ರೀತಿಯ ಭಕ್ತಿ ಭಗವಂತನಿಗೆ ಸಮರ್ಪಿಪಿಸುವುದು ಮುಖ್ಯ’ ಎಂದು ಹೇಳಿದರು

‘ನೂರಾರು ವರ್ಷಗಳಿಂದ ಮಠಮಾನ್ಯಗಳು ಶಿಕ್ಷಣ, ಸಮಾಜ ಹಾಗೂ ಸಂಸ್ಕೃತಿಯ ಪ್ರಗತಿಗೆ ಪೂರಕವಾಗಿ ಸೇವಾ ಕಾರ್ಯ ಮಾಡಿಕೊಂಡು ಬರುತ್ತಿವೆ’ ಎಂದರು.

ಸಮಾರಂಭ ದಲ್ಲಿ ರಾಜ್ಯ ಕಬ್ಬು ಬೆಳೆ ಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್, ಸಮಾಜ ಸೇವಕ ಎಂ.ಮಾದೇಶ್, ವಾಣಿಜ್ಯ ತೆರಿಗೆ ಇಲಾಖೆಯ ಅಪರ ಆಯುಕ್ತ ಹೆಳವರಹುಂಡಿ ಸಿದ್ದಪ್ಪ ಅವರನ್ನು ಸನ್ಮಾನಿಸಲಾಯಿತು.

ತುಮಕೂರು ಸಿದ್ದಗಂಗಾ ಕ್ಷೇತ್ರದ ಸಿದ್ದಲಿಂಗ ಸ್ವಾಮೀಜಿ, ಮಾಡ್ರಹಳ್ಳಿ ಪಟ್ಟದ ಮಠದ ಶಾಂತ ಮಲ್ಲಿಕಾರ್ಜುನ ಸ್ವಾಮಿ, ದೇವನೂರು ದಾಸೋಹ ಮಠದ ಮಹಾಂತ ಸ್ವಾಮೀಜಿ, ವಾಟಾಳು ಸೂರ್ಯ ಸಿಂಹಾಸನಮಠದ ಸಿದ್ದಲಿಂಗಶಿವಾಚಾರ್ಯ ಸ್ವಾಮೀಜಿ, ಕನಕಪುರ ದೇಗುಲ ಮಠದ ಚನ್ನಬಸವ ಸ್ವಾಮೀಜಿ, ಮಹದೇಶ್ವರಬೆಟ್ಟದ ಸಾಲೂರು ಮಠದ ಶಾಂತಮಲ್ಲಿಕಾರ್ಜುನ ಸ್ವಾಮೀಜಿ, ಚನ್ನಬಸವ ದೇಶಕೇಂದ್ರ ಸ್ವಾಮೀಜಿ, ಇಮ್ಮಡಿ ಮುರುಘರಾಜೇಂದ್ರ ಸ್ವಾಮೀಜಿ, ಶಿವಲಿಂಗೇಂದ್ರ ಸ್ವಾಮೀಜಿ, ಪರಶಿವಮೂರ್ತಿ ಸ್ವಾಮೀಜಿ, ಶರತ್ ಚಂದ್ರ ಸ್ವಾಮೀಜಿ, ಅಖಿಲ ಭಾರತ ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷ ಹಿನಕಲ್ ಎಚ್.ವಿ.ಬಸವರಾಜು, ತಾಲ್ಲೂಕು ವೀರಶೈವ ಮಹಾಸಭಾ ಅಧ್ಯಕ್ಷ ಸಿ.ಎಂ.ಪ್ರಕಾಶ್, ಗ್ರಾಮ ವಿದ್ಯೋದಯ ಸಂಘದ ಗೌರವ ಪ್ರಧಾನ ಕಾರ್ಯದರ್ಶಿ, ಕೆ.ಪಿ.ಮಹದೇವಸ್ವಾಮಿ, ದೇವನೂರು ವಿಶ್ರಾಂತ ಪ್ರಾಧ್ಯಾಪಕ ಡಿ.ಎಸ್.ಸದಾಶಿವಮೂರ್ತಿ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260327-38-556065751

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.