ತಿ.ನರಸೀಪುರ: ಇಲ್ಲಿನ ಕೊಳ್ಳೇಗಾಲ ಮುಖ್ಯರಸ್ತೆಯಲ್ಲಿ ಖಾಸಗಿ ಬಸ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದ್ದು, ಸವಾರ ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿದ್ದಾರೆ.

ತಾಲ್ಲೂಕಿನ ವಾಟಾಳು ಗ್ರಾಮದ ಮಂಜು ಮೃತಪಟ್ಟವರು.

ಅವರ ಪತ್ನಿ ರೂಪ ಹಾಗೂ ಪುತ್ರ ಅಜಯ್ ಗಾಯಗೊಂಡಿದ್ದು, ಮೈಸೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬುಧವಾರ ಮಳವಳ್ಳಿ ತಾಲ್ಲೂಕಿನ ಪೂರಿಗಾಲಿ ಗ್ರಾಮದಲ್ಲಿನ ಮದುವೆ ಮುಗಿಸಿಕೊಂಡು ದ್ವಿಚಕ್ರ ವಾಹನದಲ್ಲಿ ಗ್ರಾಮಕ್ಕೆ ಪತ್ನಿ ಹಾಗೂ ಪುತ್ರನ ಜತೆ ಗ್ರಾಮಕ್ಕೆ ತೆರಳುತ್ತಿದ್ದರು.

ಆಗ ಆಲಗೂಡಿನಿಂದ ಚೌಹಳ್ಳಿಗೆ ಹೋಗುವ ಅಡ್ಡರಸ್ತೆ ಬಳಿ ಎದುರಿನಿಂದ ವೇಗವಾಗಿ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ.

ಮೂವರನ್ನೂ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ತಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-38-622454189

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.