ಮೈಸೂರು: ಚಾಮುಂಡಿ ಬೆಟ್ಟ ರಸ್ತೆಯ ತಾವರೆಕಟ್ಟೆಯ ಬಳಿ ಖಾಲಿ ಜಾಗದಲ್ಲಿ ವ್ಯಕ್ತಿಯೊಬ್ಬರ ಶವ ಕೊಲೆಯಾದ ಸ್ಥಿತಿಯಲ್ಲಿ ಬುಧವಾರ ಮಧ್ಯಾಹ್ನ ಪತ್ತೆಯಾಗಿದೆ.

‘ಶವ ಪರಿಶೀಲಿಸಿದಾಗ ಕಲ್ಲಿನಿಂದ ಮುಖವನ್ನು ಜಜ್ಜಿ ಕೊಲೆ ಮಾಡಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ವ್ಯಕ್ತಿಯ ಪತ್ತೆಗೆ ಕ್ರಮವಹಿಸಿದ್ದು, ಆರೋಪಿ ಗಳಿಗಾಗಿ ಹುಡುಕಾಟ ನಡೆಸಿದ್ದೇವೆ’ ಎಂದು ಪೊಲೀಸರು ತಿಳಿಸಿದ್ದಾರೆ.

ನಜರ್ಬಾದ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಪ್ರಕರಣ ದಾಖಲಾಗಿದೆ.

ಮೈಸೂರು: ಹುಣಸೂರು ತಾಲ್ಲೂಕು ಬಿಳಿಕೆರೆ ಹೋಬಳಿಯ ಸೋಮನಹಳ್ಳಿ ನಿವಾಸಿ ಸಂಜಯ್ಗೌಡ (32) ಅವರ ಮೃತದೇಹವು ಹೂಟಗಳ್ಳಿಯ ದೊಡ್ಡ ಮೋರಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಮಂಗಳವಾರ ಪತ್ತೆಯಾಗಿದೆ.

‘ಸೈಲೆಂಟ್ ಶೋರ್ ಮುಂಭಾಗ ವಿರುವ ಮೋರಿಯಿಂದ ದುರ್ವಾಸನೆ ಬಂದ ಹಿನ್ನೆಲೆ ಅನುಮಾನಗೊಂಡ ಸಾರ್ವಜನಿಕರು ಪೊಲೀಸರಿಗೆ ವಿಷಯ ತಿಳಿಸಿದರು. ಸ್ಥಳಕ್ಕಾಗಮಿಸಿದ ವಿಜಯನಗರ ಪೊಲೀಸರು ಪರಿಶೀಲಿಸಿದಾಗ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಮದ್ಯಪಾನ ಮಾಡಿ ಮೋರಿಗೆ ಬಿದ್ದು ಸಂಜಯ್ ಗೌಡ ಮೃತಪಟ್ಟಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತರ ಕುಟುಂಬ ದವರು ನೀಡಿದ ದೂರು ಆಧರಿಸಿ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೈಸೂರು: ಹೆಬ್ಬಾಳ ಮೊದಲನೇ ಹಂತದ ನಿವಾಸಿ ಕಮಲ ಅವರ ವ್ಯಾನಿಟಿ ಬ್ಯಾಗ್ನಲ್ಲಿದ್ದ ₹ 3 ಲಕ್ಷ ಮೌಲ್ಯದ 32 ಗ್ರಾಂ ತೂಕದ ಚಿನ್ನಾಭರಣವನ್ನು ಕಳ್ಳರು ದೋಚಿ ಪರಾರಿಯಾಗಿದ್ದಾರೆ.

‘ಮಗಳ ಮನೆಗೆ ತೆರಳಿದ್ದ ಕಮಲ ಅವರು ವಾಪಸ್ ಮನೆಗೆ ತೆರಳಲು ಬಸ್ ಹತ್ತಿದ್ದು, ಚಿನ್ನಾಭರಣವನ್ನು ವ್ಯಾನಿಟಿ ಬ್ಯಾಗ್ನಲ್ಲಿ ಇರಿಸಿಕೊಂಡಿದ್ದರು. ಮನೆಗೆ ಬಂದು ನೋಡಿದಾಗ ಬ್ಯಾಗ್ನ ಜಿಪ್ ತೆರೆದಿತ್ತು. ಬಸ್ನಲ್ಲಿದ್ದ ಯಾರೋ ಚಿನ್ನಾಭರಣ ದೋಚಿದ್ದಾರೆ’ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಮೇಟಗಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260416-39-2019823698

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.