ಮೈಸೂರು: ‘ಥೈರಾಯ್ಡ್ ನಿಯಂತ್ರಣಕ್ಕೆ ಉತ್ತಮ ಜೀವನಶೈಲಿ ಹಾಗೂ ಆಹಾರ ಕ್ರಮ ಪಾಲನೆ ಬಹಳ ಮುಖ್ಯ’ ಎಂದು ಜೆಎಸ್ಎಸ್ ಆಸ್ಪತ್ರೆಯ ನಿರ್ದೇಶಕ ಡಾ.ಸಿ.ಪಿ.ಮಧು ಹೇಳಿದರು.

ನಗರದ ಜೆಎಸ್ಎಸ್ ಆಸ್ಪತ್ರೆ ಮತ್ತು ಎಂಡೋಕ್ರೈನಾಲಜಿ ವಿಭಾಗ ಆಯೋಜಿಸಿದ್ದ ‘ವಿಶ್ವ ಥೈರಾಯ್ಡ್ ದಿನಾಚರಣೆ’ಯಲ್ಲಿ ಅವರು ಮಾತನಾಡಿದರು.

‘ಥೈರಾಯ್ಡ್ ಗ್ರಂಥಿಯ ಮಹತ್ವ, ಅದರ ಕಾರ್ಯಗಳು ಮತ್ತು ಸಂಬಂಧಿಸಿದ ಕಾಯಿಲೆಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ಅಗತ್ಯ. ಇದು ಇತ್ತೀಚೆಗೆ ಸಾಮಾನ್ಯ ಕಾಯಿಲೆಯಾಗಿದ್ದು, ಇದನ್ನು ರಕ್ತ ಪರೀಕ್ಷೆಯ ಮೂಲಕ ಸುಲಭವಾಗಿ ಪತ್ತೆ ಹಚ್ಚಬಹುದು. ಸೂಕ್ತ ವೈದ್ಯಕೀಯ ಚಿಕಿತ್ಸೆ, ಔಷಧಿಗಳು, ಆಹಾರ ಕ್ರಮ ಹಾಗೂ ಶಿಸ್ತಿನ ಜೀವನಶೈಲಿಯ ಮೂಲಕ ಸಂಪೂರ್ಣವಾಗಿ ನಿಯಂತ್ರಣದಲ್ಲಿ ಇಡಬಹುದು’ ಎಂದರು.

ಜೆಎಸ್ಎಸ್ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲ ಡಾ.ಡಿ. ನಾರಾಯಣಪ್ಪ ಮಾತನಾಡಿ, ‘ಥೈರಾಯ್ಡ್ ನಮ್ಮ ಕುತ್ತಿಗೆಯ ಮುಂಭಾಗದಲ್ಲಿರುವ ಚಿಟ್ಟೆಯಾಕಾರದ ಸಣ್ಣ ಗ್ರಂಥಿಯಾಗಿದೆ. ಇದು ದೇಹದ ಅನೇಕ ಪ್ರಮುಖ ಕಾರ್ಯಗಳನ್ನು ನಿಯಂತ್ರಿಸುವ ಹಾರ್ಮೋನುಗಳನ್ನು ಉತ್ಪಾದಿಸುತ್ತದೆ. ಈ ಗ್ರಂಥಿಯ ಕಾರ್ಯವೈಖರಿಯಲ್ಲಿ ಏರುಪೇರಾದಾಗ ಅನೇಕ ದೈಹಿಕ ಮತ್ತು ಮಾನಸಿಕ ಸಮಸ್ಯೆಗಳು ಉಂಟಾಗುತ್ತವೆ. ನವಜಾತ ಶಿಶುವಿನಿಂದ ಹಿಡಿದು ವಯಸ್ಕರಲ್ಲೂ ಈ ಕಾಯಿಲೆ ಕಂಡುಬರುತ್ತಿದೆ’ ಎಂದು ತಿಳಿಸಿದರು.

‘ಗರ್ಭಾವಸ್ಥೆಯಲ್ಲಿ ಥೈರಾಯ್ಡ್ ಹಾರ್ಮೋನುಗಳ ಬೇಡಿಕೆ ಶೇ 50ರಷ್ಟು ಹೆಚ್ಚಾಗುತ್ತದೆ. ಇದು ತಾಯಿಯ ಚಯಾಪಚಯ ಕ್ರಿಯೆ ಮತ್ತು ಮಗುವಿನ ಮಿದುಳು ಹಾಗೂ ನರಮಂಡಲದ ಬೆಳವಣಿಗೆಗೆ ಅತ್ಯಗತ್ಯ. ಹೀಗಾಗಿ, ವೈದ್ಯರ ಸಲಹೆಯ ಮೇರೆಗೆ ಸರಿಯಾದ ಚಿಕಿತ್ಸೆ ಮತ್ತು ಔಷಧಿಗಳನ್ನು ತೆಗೆದುಕೊಳ್ಳುವುದರಿಂದ ತಾಯಿ ಮತ್ತು ಮಗು ಇಬ್ಬರೂ ಸುರಕ್ಷಿತವಾಗಿ ಇರಬಹುದು’ ಎಂದು ಮಾಹಿತಿ ನೀಡಿದರು.

ಬೆಂಗಳೂರಿನ ಶಂಕರ ಕ್ಯಾನ್ಸರ್ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಡಾ.ಸಸಿಮೌಲಿ ವೇಲಾಡಿ ಮಾತನಾಡಿದರು.

ವೈದ್ಯಕೀಯ ವಿಭಾಗದ ಪ್ರಾಧ್ಯಾಪಕ ಮತ್ತು ಮುಖ್ಯಸ್ಥ ಡಾ.ಎಂ.ಸುರೇಶ್ ಬಾಬು, ಪ್ರಾಧ್ಯಾಪಕ ಡಾ.ವೈ.ಎಸ್.ರವಿಕುಮಾರ್, ಎಂಡೋಕ್ರೈನಾಲಜಿ ವಿಭಾಗದ ವೈದ್ಯರಾದ ಡಾ.ಲಕ್ಷ್ಮಿ ನಾಗೇಂದ್ರ, ಡಾ.ಅಜಯ್ ಹನುಮಂತು, ಡಾ.ಸಂಜನಾ, ಡಾ.ರಘು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260522-39-2138281792

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.