ಮೈಸೂರು: ‘ವಾಹನಗಳ ಸವಾರಿ, ಚಾಲನೆ ವೇಳೆ ಸಂಚಾರ ನಿಯಮ ಪಾಲಿಸಬೇಕು’ ಎಂದು ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ಕೆ.ಎಸ್.ಸುಂದರರಾಜ್ ತಿಳಿಸಿದರು.

ಕಡಕೊಳದ ಸಿರೇನ್ ಕಂಪನಿಯು ರಸ್ತೆ ಸುರಕ್ಷತಾ ಅಭಿಯಾನದ ಅಂಗವಾಗಿ ಇಲ್ಲಿನ ಯುವರಾಜ ಕಾಲೇಜಿನಲ್ಲಿ ಈಚೆಗೆ ವಿದ್ಯಾರ್ಥಿಗಳಿಗೆ ಹೆಲ್ಮೆಟ್ ವಿತರಿಸಿ ಅವರು ಮಾತನಾಡಿದರು.

‘ದೇಶದಲ್ಲಿ ಪ್ರತಿ ವರ್ಷ 1.53 ಲಕ್ಷ ಜನರು ಅಪಘಾತಗಳಲ್ಲಿ ಸಾವಿಗೀಡಾಗುತ್ತಿದ್ದಾರೆ. ರಾಜ್ಯದಲ್ಲಿ ಪ್ರತಿ ವರ್ಷ 40ಸಾವಿರ ಅಪಘಾತಗಳಲ್ಲಿ ಹತ್ತು ಸಾವಿರ ಮಂದಿ ಮೃತಪಟ್ಟಿದ್ದು ವರದಿಯಾಗಿದೆ. ನಗರದಲ್ಲಿ 600 ಜನರು ಅಪಘಾತಗಳಲ್ಲಿಪ್ರತಿ ವರ್ಷ ಸಾವಿಗೀಡಾಗುತ್ತಿದ್ದಾರೆ. ಇದರಲ್ಲಿ ಶೇ 2ರಷ್ಟು ಮಂದಿ ಹೆಲ್ಮೆಟ್ ಧರಿಸದೆ ಇರುವವರೇ ಇರುತ್ತಾರೆ’ ಎಂದು ಹೇಳಿದರು.

ಕಾಲೇಜಿನ ಪ್ರಾಂಶುಪಾಲ ಪ್ರೊ.ಎಸ್.ಮಹದೇವಮೂರ್ತಿ ಅಧ್ಯಕ್ಷತೆ ವಹಿಸಿದ್ದರು. ಸಿರೇನ್ ಕಂಪನಿಯ ನಿರ್ದೇಶಕರಾದ ಟಕಾಕೊ ಯನಾಸೆ, ಕೋಝೋ ಅಸಕುರ ಭಾಗವಹಿಸಿದ್ದರು.

ಕನ್ನಡ ವಿಭಾಗದ ಮುಖ್ಯಸ್ಥ ಪ್ರೊ.ಸಿ.ಡಿ.ಪರಶುರಾಮ್ ಸ್ವಾಗತಿಸಿದರು. ಸಿರೇನ್ ಕಂಪನಿಯ ಎಚ್ಆರ್ ವಿಭಾಗದ ಹಿರಿಯ ವ್ಯವಸ್ಥಾಪಕ ಎನ್.ಪದ್ಮನಾಭ ಪ್ರಾಸ್ತಾವಿಕವಾಗಿ ಮಾತನಾಡಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260503-39-570999636

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.