ಮೈಸೂರು: ‘ನಗರದಾದ್ಯಂತ ಅವೈಜ್ಞಾನಿಕವಾಗಿ ಟ್ರಾಫಿಕ್ ಸಿಗ್ನಲ್ ದೀಪಗಳನ್ನು ಅಳವಡಿಸಿದ್ದು, ಈ ಬಗ್ಗೆ ಮಾಹಿತಿ ಹಕ್ಕು ಕಾಯ್ದೆ ಅಡಿಯಲ್ಲಿ ಕೇಳಿದ್ದ ಪ್ರಶ್ನೆಗಳಿಗೆ ಪೊಲೀಸ್ ಇಲಾಖೆ ಸಮರ್ಪಕ ಉತ್ತರ ನೀಡಿಲ್ಲ’ ಎಂದು ವಕೀಲ ಎ.ಎಂ. ಭಾಸ್ಕರ್ ದೂರಿದರು.

‘ಏಕಾಏಕಿ ಎಲ್ಲ ಕಡೆ ಟ್ರಾಫಿಕ್ ಸಿಗ್ನಲ್ ಹಾಕಿರುವುದರಿಂದ ಅನುಕೂಲಕ್ಕಿಂತ ಅನಾನುಕೂಲವೇ ಹೆಚ್ಚಿದೆ. ಅಗತ್ಯವಿಲ್ಲದ ಜಂಕ್ಷನ್ಗಳಲ್ಲಿಯೂ ಸಿಗ್ನಲ್ ಅಳವಡಿಸಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಟ್ರಾಫಿಕ್ ಸಮಸ್ಯೆ ಹೆಚ್ಚಾಗಿದೆ. ಯಾವ ಆಧಾರದಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂಬ ಪ್ರಶ್ನೆಗೆ ಇಲಾಖೆ ಸಮರ್ಪಕವಾಗಿ ಉತ್ತರಿಸಿಲ್ಲ’ ಎಂದು ಅವರು ಗುರುವಾರ ಸುದ್ದಿಗೋಷ್ಠಿಯಲ್ಲಿ ಬೇಸರ ವ್ಯಕ್ತಪಡಿಸಿದರು.

‘ಆರ್ಟಿಐ ಅಡಿಯಲ್ಲಿ ಅರ್ಜಿ ಹಾಕಿ ಯಾವ ಯಾವ ವೃತ್ತದಲ್ಲಿ ಸರ್ವೆ ನಡೆದಿದೆ, ಎಷ್ಟು ವೆಚ್ಚವಾಗಿದೆ, ಸಂಬಂಧಿಸಿದವರ ಅನುಮತಿ ಪಡೆಯಲಾಗಿದೆಯೇ ಎಂಬ 14 ಪ್ರಶ್ನೆ ಕೇಳಿದ್ದೆ. ಅದಕ್ಕೆ ಒಂದು ಪ್ರಶ್ನೆಗೆ ಮಾತ್ರ ಉತ್ತರ ನೀಡಿದ್ದು, ಉಳಿದ 13 ಪ್ರಶ್ನೆಗೆ ಮಾಹಿತಿ ನೀಡಿಲ್ಲ. ಯಾವ ಕಾರಣಕ್ಕೆ ಸಿಗ್ನಲ್ ಅಳವಡಿಸಲಾಗಿದೆ ಎಂಬ ಮಾಹಿತಿ ನೀಡಬೇಕು. ಇಲ್ಲವಾದರೆ ಲೋಕಾಯುಕ್ತರಿಗೆ ದೂರು ನೀಡಲಾಗುವುದು’ ಎಂದರು.

‘ಮುಂದಿನ ಹಂತವಾಗಿ ಪೊಲೀಸ್ ಉನ್ನತ ಅಧಿಕಾರಿಗಳಿಗೆ ಹಾಗೂ ಗೃಹ ಸಚಿವರಿಗೆ ದೂರು ನೀಡಲಾಗುತ್ತದೆ. ಅದಕ್ಕೂ ಸೂಕ್ತ ಉತ್ತರ ಬರದಿದ್ದರೆ, ಹೈಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿಯ ಅರ್ಜಿ ಸಲ್ಲಿಸುತ್ತೇವೆ’ ಎಂದು ಹೇಳಿದರು.

‘ಯೋಜನಗೆ ಮೈಸೂರು ಮಹಾನಗರ ಪಾಲಿಕೆ, ಮೈಸೂರು ಅಭಿವೃದ್ಧಿ ಪ್ರಾಧಿಕಾರ ಹಾಗೂ ಜಿಲ್ಲಾಧಿಕಾರಿ ಅನುಮತಿ ಪಡೆದಿಲ್ಲ. ಇಲ್ಲಿ ಸಂಭವಿಸಿರುವ ಅಪಘಾತಗಳ ಮಾಹಿತಿ ಕೇಳಿದಾಗ ನೀಡಿರುವ ಉತ್ತರ ಸಮಾಧಾನಕರವಾಗಿಲ್ಲ. ಈ ಬಗ್ಗೆ ಸಾರ್ವಜನಿಕರ ಅಹವಾಲು ಸಹ ಆಲಿಸಿಲ್ಲ’ ಎಂದು ದೂರಿದರು.

ವಕೀಲ ಸಚಿನ್, ಸಾಮಾಜಿಕ ಕಾರ್ಯಕರ್ತ ಪ್ರದೀಪ್ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260327-39-353708532

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.