ಮೈಸೂರು: ಸಾತಗಳ್ಳಿ ಸಮೀಪದ ಅಮೃತ ಬಡಾವಣೆಯಲ್ಲಿ ಖರ್ಚಿಗೆ ಹಣ ನೀಡಿಲ್ಲವೆಂದು ಇಬ್ಬರು ಲಿಂಗತ್ವ ಅಲ್ಪಸಂಖ್ಯಾತರ ಮೇಲೆ ಭಾನುವಾರ ರಾತ್ರಿ ಹಲ್ಲೆ ನಡೆಸಿದ ಯುವಕರು, ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿದ್ದಾರೆ.

ಲಿಂಗತ್ವ ಅಲ್ಪಸಂಖ್ಯಾತರಾದ ಪಾರಿ ಮತ್ತು ಆನಮ್ ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಮೃತ ಬಡಾವಣೆಯ ನಿವಾಸಿಯಾದ ಆನಮ್ ಬಳಿ ಯುವಕರು ಖರ್ಚಿಗೆ ಹಣ ಕೇಳಿದ್ದಾರೆ. ಇದಕ್ಕೆ ಆನಮ್ ನಿರಾಕರಿಸಿದಾಗ, ಯುವಕರು ಗಲಾಟೆ ತೆಗೆದಿದ್ದಾರೆ. ಆಗ ಸ್ನೇಹಿತೆಯಾದ ಪಾರಿಯನ್ನು ಆನಮ್ ಕರೆ ಮಾಡಿ ಕರೆಸಿಕೊಂಡಿದ್ದು, ಪಾರಿ ಸ್ಥಳಕ್ಕೆ ಬಂದು ಯುವಕರನ್ನು ಪ್ರಶ್ನಿಸಿದ್ದಾರೆ. ಇದರಿಂದ ಕೋಪಗೊಂಡ ಯುವಕರು ಇಬ್ಬರ ಮೇಲೂ ಹಲ್ಲೆ ನಡೆಸಿ ಆನಮ್ಗೆ ಚಾಕುವಿನಿಂದ ಇರಿದಿದ್ದಾರೆ.

ಆನಮ್ ನೀಡಿದ ದೂರು ಆಧರಿಸಿ ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹಲ್ಲೆ ನಡೆಸಿದ ಯುವಕರ ಬಂಧನಕ್ಕೆ ಶೋಧ ಕಾರ್ಯ ನಡೆಯುತ್ತಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260401-37-912297992

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.