ಮೈಸೂರು: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಲ್ಲಿನ ಚಾಮುಂಡಿಬೆಟ್ಟದ ಪಾದದಲ್ಲಿರುವ ಸುತ್ತೂರು ಶಾಖಾ ಮಠಕ್ಕೆ ಗುರುವಾರ ಭೇಟಿ ನೀಡಿ, ಪೀಠಾಧಿಪತಿ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರ ಆಶೀರ್ವಾದ ಪಡೆದರು. ಕೆಲ ಕಾಲ ಮಾತುಕತೆ ನಡೆಸಿದ ಅವರನ್ನು ಶ್ರೀಗಳು ಸತ್ಕರಿಸಿದರು.

ಜೆಎಸ್ಎಸ್ ಮಹಾವಿದ್ಯಾಪೀಠದ ಕಾರ್ಯನಿರ್ವಾಹಕ ಕಾರ್ಯದರ್ಶಿ ಸಿ.ಜಿ. ಬೆಟಸೂರಮಠ, ಜೆಎಸ್ಎಸ್–ಎಎಚ್ಇಆರ್ ಸಮಕುಲಾಧಿಪತಿ ಬಿ. ಸುರೇಶ್, ಕುಲಪತಿ ಎಚ್. ಬಸವನಗೌಡಪ್ಪ, ಕಾನೂನು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಸಿ. ಬಸವರಾಜು, ಕೆಎಸ್ಒಯು ಕುಲಪತಿ ಪ್ರೊ.ಶರಣಪ್ಪ ವಿ.ಹಲಸೆ ಪಾಲ್ಗೊಂಡಿದ್ದರು.

ಈ ವೇಳೆ ಪತ್ರಕರ್ತರೊಂದಿಗೆ ಮಾತನಾಡಿದ ಸಚಿವರು, ‘ನಾನು ಮೈಸೂರಿಗೆ ಬಂದಾಗೆಲ್ಲ ಶ್ರೀಗಳ ಆಶೀರ್ವಾದ ಪಡೆಯುತ್ತೇನೆ. ದೈವೀಕವಾದ ಈ ಕ್ಷೇತ್ರಕ್ಕೆ ಭೇಟಿ ನೀಡಿದ್ದು ವಿಶೇಷ ಅನುಭೂತಿ ನೀಡಿದೆ’ ಎಂದು ಹೇಳಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260327-39-834442076

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.