ಮೈಸೂರು: ‘ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವ ಪ್ರೊ. ನವೀನ್ಕುಮಾರ್ ದಲಿತ ಎಂಬ ಒಂದೇ ಕಾರಣಕ್ಕೆ ಅವರನ್ನು ಬಲಿಪಶು ಮಾಡುವ ಪ್ರಯತ್ನ ನಡೆದಿದೆ. ಈ ಧೋರಣೆ ಮುಂದುವರಿದಲ್ಲಿ ಉಗ್ರ ಹೋರಾಟ ನಡೆಸಲಾಗುವುದು’ ಎಂದು ಮಾಜಿ ಮೇಯರ್ ಪುರುಷೋತ್ತಮ್ ಎಚ್ಚರಿಸಿದರು.

‘ನವೀನ್ಕುಮಾರ್ ಕುಲಸಚಿವರಾಗಿ ಏಳೆಂಟು ತಿಂಗಳಾಗಿದೆ. ಈಚೆಗೆ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮ ಒಂದರಲ್ಲಿ ಅವರ ಪಾತ್ರ ಇಲ್ಲದೇ ಇದ್ದರೂ ಅವರನ್ನು ಸಿಲುಕಿಸುವ ಪ್ರಯತ್ನ ನಡೆದಿದೆ. ವರ್ಗಾವಣೆಯ ಯತ್ನ ನಡೆದಿದೆ’ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ದೂರಿದರು.

‘ಮುಕ್ತ ವಿವಿ ಆಡಳಿತವನ್ನು ಸದಾ ಒಂದು ವರ್ಗವೇ ತನ್ನ ಕೈಯ್ಯಲ್ಲಿ ಇರಿಸಿಕೊಂಡಿದೆ. ಇಲ್ಲಿ ಜಾತಿ ಆಡಳಿತ ಕೆಲಸ ಮಾಡುತ್ತಿದೆ’ ಎಂದು ಆರೋಪಿಸಿದರು.

‘ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಪ್ರತಾಪ ಸಿಂಹರ ಟೀಕೆ ಆನೆ ನೋಡಿ ನಾಯಿ ಬೊಗಳಿದಂತೆ’ ಎಂದು ಲೇವಡಿ ಮಾಡಿದ ಅವರು, ‘ಖರ್ಗೆ ಅಂತಹ ನಾಯಕನ ಬಗ್ಗೆ ಮಾತನಾಡುವ ನೈತಿಕತೆ ಯಾರಿಗೂ ಇಲ್ಲ’ ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260410-36-470159219

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.