ಮೈಸೂರು: ‘ಶಿಷ್ಯ ವೇತನಕ್ಕೆ ಅರ್ಹ ಅರ್ಜಿದಾರರನ್ನು ಪರಿಗಣಿಸುತ್ತೇವೆ’ ಎಂದು ಮೈಸೂರು ವಿಶ್ವವಿದ್ಯಾಲಯದ ಪರಿಶಿಷ್ಟ ಜಾತಿ, ಪಂಗಡ ವಿಶೇಷ ಘಟಕ ತಿಳಿಸಿದೆ.

ಸಂಶೋಧಕರಿಗೆ ಶಿಷ್ಯವೇತನ ನೀಡುವಂತೆ ಒತ್ತಾಯಿಸಿ ಶಿಷ್ಯವೇತನ ರಹಿತ ಸಂಶೋಧಕರ ಸಂಘದ ಸದಸ್ಯರು ನಡೆಸುತ್ತಿರುವ ಪ್ರತಿಭಟನೆಗೆ ಸಂಬಂಧಿಸಿ ಪ್ರತಿಕ್ರಿಯಿಸಿ, ‘ಸಿಂಡಿಕೇಟ್ ನಿರ್ಣಯದಂತೆ ವರ್ಷಕ್ಕೆ 20 ಸಂಶೋಧಕರಿಗೆ ವಿಶ್ವವಿದ್ಯಾಲಯದ ಆಂತರಿಕ ಸಂಪನ್ಮೂಲಗಳಿಂದ ಐದು ವರ್ಷ ಶಿಷ್ಯವೇತನ ನೀಡಲಾ ಗುತ್ತಿದೆ. 2026– 27ನೇ ಸಾಲಿನಲ್ಲಿ 116 ಸಂಶೋಧಕರು ಅರ್ಜಿ ಸಲ್ಲಿಸಿದ್ದು, ಇದರಲ್ಲಿ 96 ಸಂಶೋಧಕರಿಗೆ ಶಿಷ್ಯವೇತನ ನೀಡಲು ಅನುದಾನಕ್ಕಾಗಿ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ. ಶೀಘ್ರ ಆಯ್ಕೆ ಸಮಿತಿಯು ಶಿಷ್ಯವೇತನಕ್ಕೆ ಅರ್ಹ ಅರ್ಜಿದಾರರನ್ನು ಪರಿಗಣಿಸಿ ಕ್ರಮವಹಿಸುತ್ತದೆ’ ಎಂದು ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದೆ.

ಮುಂದುವರಿದ ಧರಣಿ: ಸಂಶೋಧಕ ರಿಗೆ ಶಿಷ್ಯವೇತನ ನೀಡುವಂತೆ ಒತ್ತಾಯಿಸಿ ಶಿಷ್ಯವೇತನ ರಹಿತ ಸಂಶೋಧಕರ ಸಂಘದ ಸದಸ್ಯರು ನಡೆಸುತ್ತಿರುವ ಅಹೋರಾತ್ರಿ ಧರಣಿಯು ಬುಧವಾರವೂ ಮುಂದುವ ರಿಯಿತು. ಕ್ರಾಫರ್ಡ್ ಭವನದ ಮುಂಭಾಗ ಪ್ರತಿಭಟನಕಾರರು ಕ್ರಾಂತಿ ಗೀತೆ ಹಾಡಿ ಆಕ್ರೋಶ ವ್ಯಕ್ತಪಡಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260521-39-1191737570

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.