ಮೈಸೂರು: ಇಲ್ಲಿನ ಮೈಸೂರು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ಟಿ.ಆರ್. ಚಂದ್ರಶೇಖರ್ ಅವರ ವಿರುದ್ಧ ಖಂಡನಾ ನಿರ್ಣಯ ಕೈಗೊಳ್ಳಲಾಗಿದೆ.

ವಿ.ವಿ.ಯ ಸಿಂಡಿಕೇಟ್ನ ಸಾಮಾನ್ಯ ಸಭೆಯಲ್ಲಿ ಈ ಬಗ್ಗೆ ತೀರ್ಮಾನಿಸಲಾಗಿದೆ.

‘ಚಂದ್ರಶೇಖರ್ ಅವರು ಆಧಾರಹಿತ ಮತ್ತು ಅಪ್ರಮಾಣಿತ ಮಾಹಿತಿ ಇಟ್ಟುಕೊಂಡು ವಿ.ವಿ.ಯ ಕಾರ್ಯನಿರ್ವಹಣೆ ಹಾಗೂ ಶಾಸನಬದ್ಧ ಅಧಿಕಾರಿಗಳ ವಿರುದ್ಧ ಮಾಡುತ್ತಿರುವ ಆರೋಪಗಳನ್ನು ಗಂಭೀರವಾಗಿ ಪರಿಗಣಿಸಲಾಯಿತು’ ಎಂದು ಪ್ರಕಟಣೆ ತಿಳಿಸಿದೆ.

ವಿ.ವಿ.ಯ ಟೆಂಡರ್ ಪ್ರಕ್ರಿಯೆಗಳು ಹಾಗೂ ಆಡಳಿತಾತ್ಮಕ ಮತ್ತು ಆರ್ಥಿಕ ವಿಚಾರಗಳಲ್ಲಿ ಅಕ್ರಮವಾಗಿ ಎಂದು ಮಾಡಿರುವ ಆರೋಪಗಳು ಕೇವಲ ಕಾಲ್ಪನಿಕ, ಸತ್ಯಕ್ಕೆ ದೂರ ಮತ್ತು ದುರುದ್ದೇಶಪೂರಿತವಾಗಿವೆ. ಅವುಗಳಿಗೆ ಯಾವುದೇ ಅಧಿಕೃತ ದಾಖಲೆಗಳ ಬೆಂಬಲವಿಲ್ಲ ಎಂದು ಸಭೆಯು ಅಭಿಪ್ರಾಯಪಟ್ಟಿದೆ. ‘ಶತಮಾನದ ಇತಿಹಾಸವಿರುವ ಪ್ರತಿಷ್ಠಿತ ಸಾರ್ವಜನಿಕ ಸಂಸ್ಥೆಯ ವಿರುದ್ಧ, ಅನಧಿಕೃತ ಮತ್ತು ಅರೆಬರೆ ದಾಖಲೆಗಳನ್ನು ಇಟ್ಟುಕೊಂಡು ಭ್ರಷ್ಟಾಚಾರದ ಆರೋಪ ಮಾಡುವುದು ಸಾಂಸ್ಥಿಕ ಆಡಳಿತದ ತತ್ವ ಮತ್ತು ಜವಾಬ್ದಾರಿಯುತ ಸಾರ್ವಜನಿಕ ನಡತೆಗೆ ವ್ಯತಿರಿಕ್ತವಾದುದಾಗಿದೆ. ಅವರು ವಿ.ವಿ.ಯ ಅಧಿಕಾರಿಗಳ ಬಳಿ ಸ್ಪಷ್ಟನೆ ಪಡೆಯುತ್ತಿಲ್ಲ. ಅಧಿಕೃತ ಲೋಗೊ ಮತ್ತು ಹೆಸರನ್ನು ದುರ್ಬಳಕೆ ಮಾಡಿಕೊಳ್ಳುವ ಮೂಲಕ ಸಂಸ್ಥೆಯ ಘನತೆಗೆ ಕುಂದು ತರುತ್ತಿದ್ದಾರೆ’ ಎಂದು ತಿಳಿಸಿದೆ.

‘ಶಾಸನಬದ್ಧ ಪ್ರಕ್ರಿಯೆ ಅನುಸರಿಸದೆ, ಕೇವಲ ಸಂಸ್ಥೆಯ ಹೆಸರನ್ನು ಕೆಡಿಸುವ ಉದ್ದೇಶದ ಬೇಜವಾಬ್ದಾರಿ ವರ್ತನೆ ಸಹಿಸಲು ಸಾಧ್ಯವಿಲ್ಲ. ಅವರ ನಡವಳಿಕೆಯನ್ನು ಸರ್ವಾನುಮತದಿಂದ ಖಂಡಿಸಿ ನಿರ್ಣಯ ಅಂಗೀಕರಿಸಲಾಗಿದೆ. ಈ ಕುರಿತು ಸಮಗ್ರ ವರದಿಯನ್ನು ರಾಜ್ಯ ಸರ್ಕಾರ ಹಾಗೂ ರಾಜ್ಯಪಾಲರಿಗೆ ಸಲ್ಲಿಸಿ, ಅವರ ವಿರುದ್ಧ ಕಾನೂನುಬದ್ಧ ಕ್ರಮ ಕೈಗೊಳ್ಳುವಂತೆ ಕೋರಲು ಸಭೆ ತೀರ್ಮಾನಿಸಿದೆ’ ಎಂದು ಮಾಹಿತಿ ನೀಡಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-39-778217249

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.