ಮೈಸೂರು: ಪರಿಶಿಷ್ಟ ಜಾತಿ ವಿದ್ಯಾರ್ಥಿಗೆ ಮಾನಸಿಕ ಕಿರುಕುಳ ನೀಡಿದ ಆರೋಪದಲ್ಲಿ ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎನ್.ಕೆ.ಲೋಕನಾಥ್ ಸಹಿತ ನಾಲ್ವರ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗ ಜಯಲಕ್ಷ್ಮಿಪುರಂ ಪೊಲೀಸ್ ಠಾಣೆ ಅಧಿಕಾರಿಗೆ ಪತ್ರ ಬರೆದಿದೆ.

‘ವಿವಿ ಹಗರಣಗಳ ಬಗ್ಗೆ ಪ್ರಶ್ನಿಸಲು ಆರ್ಟಿಐ ಕಾರ್ಯಕರ್ತ ಕಾರ್ತಿಕ್ ತೆರಳಿದಾಗ ಅಲ್ಲಿನ ಪ್ರೊ.ಆರ್.ಎಸ್.ರಮಾಕಾಂತ್ ಏಕವಚನದಲ್ಲಿ ಮಾತನಾಡಿಸಿದ್ದು, ಕುಲಪತಿ, ಕುಲಸಚಿವ ಹಾಗೂ ರೇಷ್ಮೆ ಅಧ್ಯಯನ ವಿಭಾಗದ ಮುಖ್ಯಸ್ಥರ ಬಳಿ ನ್ಯಾಯ ಕೇಳಿದಾಗ ಹಿಂಸೆ ನೀಡಿದ್ದಾರೆ. ಜಯಲಕ್ಷ್ಮಿಪುರಂ ಠಾಣೆಗೆ ದೂರು ನೀಡಿದರೂ ಕ್ರಮವಹಿಸಿಲ್ಲ. ಹೀಗಾಗಿ ಕಿರುಕುಳ ನೀಡಿದ ಪ್ರೊ.ಎನ್.ಕೆ.ಲೋಕನಾಥ್, ಪ್ರೊ.ಆರ್.ಎಸ್.ರಮಾಕಾಂತ್, ಎಂ.ಸುರೇಶ್ ಬೆಂಜಮೀನ್, ಅಶ್ವಥ್ ಪ್ರಸಾದ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

‘ಠಾಣೆಗೆ ಈ ಕುರಿತು ಯಾವುದೇ ಪತ್ರ ಬಂದಿಲ್ಲ. ಎಫ್ಐಆರ್ ದಾಖಲಿಸಿಲ್ಲ’ ಎಂದು ಪೊಲೀಸರು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260418-39-568962128

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.