ಮೈಸೂರು: ತಾಲ್ಲೂಕಿನ ವರುಣ ಹೋಬಳಿಯ ಪಿಲ್ಲಹಳ್ಳಿ ಗ್ರಾಮದ ಗಿರಿಬೆಟ್ಟ ಕೆರೆಗೆ ಹೊಂದಿಕೊಂಡಂತಿರುವ ಕೃಷಿ ಜಮೀನುಗಳಿಗೆ ಶನಿವಾರ ರಾತ್ರಿ ಸುರಿದ ಭಾರಿ ಮಳೆ ಭಾರಿ ಆಘಾತ ನೀಡಿದೆ. ಲಕ್ಷಾಂತರ ರೂಪಾಯಿ ಮೌಲ್ಯದ ವಾಣಿಜ್ಯ ಬೆಳೆಗಳು ನಾಶವಾಗಿದ್ದು, ರೈತರು ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ.

ಬಿರುಗಾಳಿ ಸಹಿತ ಸುರಿದ ಮಳೆಯ ಆರ್ಭಟಕ್ಕೆ ಪಿಲ್ಲಹಳ್ಳಿಯ ಸರ್ವೆ ನಂಬರ್ 46/1 ಮತ್ತು 46/2 ರ ವ್ಯಾಪ್ತಿಯ ಕೃಷಿ ಭೂಮಿಯಲ್ಲಿ ವ್ಯಾಪಕ ಹಾನಿಯಾಗಿದೆ. ನಿವೃತ್ತ ಅಧಿಕಾರಿ ಜಯವಿಭವಸ್ವಾಮಿ ಅವರ ತೋಟದಲ್ಲಿದ್ದ 5 ಬೃಹತ್ ತೆಂಗಿನ ಮರಗಳು ಹಾಗೂ 25ಕ್ಕೂ ಹೆಚ್ಚು ಅಡಿಕೆ ಮರಗಳು ಬುಡಸಮೇತ ಧರೆಗುರುಳಿವೆ. ಕಟಾವಿಗೆ ಬಂದಿದ್ದ ಇಡೀ ಬಾಳೆ ತೋಟ ಸಂಪೂರ್ಣವಾಗಿ ನೆಲಕಚ್ಚಿದೆ.

ಸುತ್ತಲಿನ ಇನ್ನೂ ಕೆಲವು ಜಮೀನುಗಳಲ್ಲಿ ಬೆಳೆ ಹಾನಿ ಸಂಭವಿಸಿದೆ. ರಸ್ತೆ ಬದಿಯ ವಿದ್ಯುತ್ ಪರಿವರ್ತಕ (ಟ್ರಾನ್ಸ್ಫಾರ್ಮರ್) ಕಂಬಗಳು ಮುರಿದು ಬಿದ್ದಿದ್ದು, ಮರಗಳು ನೆಲಕ್ಕೆ ಉರುಳಿವೆ. ಇದರಿಂದಾಗಿ ವಾಹನಗಳ ಸಂಚಾರಕ್ಕೆ ಅಡ್ಡಿಯಾಗಿದೆ.

ಮಳೆಯಿಂದಾಗಿ ಇಷ್ಟೊಂದು ದೊಡ್ಡಪ್ರಮಾಣದ ಆಸ್ತಿ ಮತ್ತು ಬೆಳೆ ನಷ್ಟ ಸಂಭವಿಸಿದ್ದರೂ, ಕಂದಾಯ ಇಲಾಖೆಯಾಗಲಿ ಅಥವಾ ತೋಟಗಾರಿಕಾ ಇಲಾಖೆಯ ಅಧಿಕಾರಿಗಳಾಗಲಿ ಸ್ಥಳಕ್ಕೆ ಭೇಟಿ ನೀಡಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು.

ತಕ್ಷಣವೇ ಜಿಲ್ಲಾಡಳಿತ ಮತ್ತು ಕಂದಾಯ ಅಧಿಕಾರಿಗಳು ಸ್ಥಳಕ್ಕೆ ಬಂದು ಜಂಟಿ ಸಮೀಕ್ಷೆ (ಮಹಜರು) ನಡೆಸಬೇಕು. ಹಾನಿಗೆ ಒಳಗಾದ ಟ್ರಾನ್ಸ್ಫಾರ್ಮರ್ ಹಾಗೂ ಕಂಬಗಳನ್ನು ದುರಸ್ತಿಗೊಳಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-38-1917174167

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.