ಮೈಸೂರು: ಮಂಡ್ಯದ ಬಿಜೆಪಿ ಕಾರ್ಯಕರ್ತ ಶಿವಕುಮಾರ್ ಆರಾಧ್ಯ ಎಂಬುವರು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿರುವುದನ್ನು ಖಂಡಿಸಿ ಶುಕ್ರವಾರ ಹಳೇ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಕರ್ನಾಟಕ ಸೇನಾ ಪಡೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

‘ವಾಟಾಳ್ ನಾಗರಾಜ್ ಅವರು ಕನ್ನಡ ನಾಡಿನ ನೆಲ, ಜಲ, ಭಾಷೆಗಾಗಿ ಏಳು ದಶಕಗಳಿಂದ ಹೋರಾಟ ಮಾಡುವ ಮೂಲಕ ರಾಜ್ಯದಲ್ಲಿ ಇತಿಹಾಸವನ್ನೇ ಸೃಷ್ಟಿಸಿದ್ದಾರೆ. ಕನ್ನಡ ನಾಡಿನ ವಿಚಾರಕ್ಕೆ ಏನೇ ಧಕ್ಕೆಯಾದರೂ ಮೊದಲು ಪ್ರತಿಭಟಿಸುವುದು ಇವರೇ. ಹಾಗೂ ವಿನೂತನವಾಗಿ ಚಳವಳಿಗಳನ್ನು ನಡೆಸಿ ರಾಜ್ಯ, ಕೇಂದ್ರ ಸರ್ಕಾರದ ಗಮನವನ್ನು ಸೆಳೆಯುವುದರಲ್ಲಿ ಅತ್ಯಂತ ಯಶಸ್ವಿಯಾಗಿದ್ದಾರೆ. ಅಂತಹ ಮೇರು ಹೆಸರಿರುವ ಚಳವಳಿಗಾರನ ವಿರುದ್ಧ ಸರ್ಕಾರ ಸುಮೊಟೊ ಪ್ರಕರಣ ದಾಖಲಿಸಿ, ಈತನನ್ನು ಗಡಿಪಾರು ಮಾಡಬೇಕು. ಸರ್ಕಾರ ಈತನನ್ನು ಕೂಡಲೇ ಬಂಧಿಸಬೇಕು’ ಎಂದು ಪ್ರತಿಭಟನಕಾರರು ಒತ್ತಾಯಿಸಿದರು.

ಸೇನಾ ಪಡೆಯ ಜಿಲ್ಲಾ ಘಟಕದ ಅಧ್ಯಕ್ಷ ತೇಜೇಶ್ ಲೋಕೇಶ್ ಗೌಡ ಅಧ್ಯಕ್ಷತೆ ವಹಿಸಿದ್ದರು. ಕೃಷ್ಣಪ್ಪ, ಗೋಲ್ಡನ್ ಸುರೇಶ್, ಪ್ರಜೀಶ್, ಸಿಂಧುವಳ್ಳಿ ಶಿವಕುಮಾರ್, ಕೆ.ಎನ್. ನಾಗೇಗೌಡ, ಗಿರೀಶ್ ಎಚ್, ಡಾ. ಶಾಂತರಾಜೇಅರಸ್, ಮಧುವನ ಚಂದ್ರು, ಮಂಜುಳಾ, ತಾಯೂರು ಗಣೇಶ್, ಎಳನೀರು ರಾಮಣ್ಣ, ಸುಜಾತಾ, ಕುಮಾರ್, ದರ್ಶನ್ ಗೌಡ, ಪ್ರದೀಪ್, ಜ್ಯೋತಿ, ಹನುಮಂತಯ್ಯ, ಪ್ರಭಾಕರ, ಬಸವರಾಜು, ಶಿವರಾಂ ಗೌಡ, ನಾರಾಯಣ ಗೌಡ, ರಮೇಶ, ರವಿ ನಾಯಕ, ಮೂರ್ತಿ, ರವೀಶ್ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-39-1134614955

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.