ಮೈಸೂರು: ಯುದ್ಧ ನಿಲ್ಲಿಸಿ, ಗ್ಯಾಸ್ ಸಿಲಿಂಡರ್ ಕೊಡಿಸುವಂತೆ ಒತ್ತಾಯಿಸಿ, ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ರಾಮನಗರದಿಂದ ಮೈಸೂರಿನವರೆಗೆ ಮಂಗಳವಾರ ಈಡುಗಾಯಿ ಚಳವಳಿ ನಡೆಸಿದರು.

ನಗರದ ಹಾರ್ಡಿಂಜ್ ವೃತ್ತದ ಬಳಿ ಈಡುಗಾಯಿ ಒಡೆದು, ‘ಇರಾನ್ ಮೇಲಿನ ಅಮೆರಿಕ ಹಾಗೂ ಇಸ್ರೇಲ್ ದಾಳಿಯಿಂದ ಮಾನವ ಕುಲವೇ ಬೆಚ್ಚಿ ಬಿದ್ದಿದೆ. ಇದರಿಂದ ತೀವ್ರ ಪರಿಣಾಮ ಬೀರಿ, ಜನರು ಅಡುಗೆ ಮಾಡಲು ಗ್ಯಾಸ್ ಸಿಲಿಂಡರ್ ಇಲ್ಲದೇ ಪರದಾಡುತ್ತಿದ್ದಾರೆ. ಈ ಕೂಡಲೇ ಯುದ್ಧ ನಿಲ್ಲಿಸಿ, ಶಾಂತಿ ಸ್ಥಾಪನೆಯಾಗಲಿ’ ಎಂದು ಒತ್ತಾಯಿಸಿದರು.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ವಾಟಾಳ್, ‘ಗ್ಯಾಸ್ ಸಿಲಿಂಡರ್ ಇಲ್ಲದೇ ಆಟೊ ಚಾಲಕರು, ಹೋಟೆಲ್ನವರು, ಬೀದಿ ಬದಿ ವ್ಯಾಪಾರಿಗಳು ಪರದಾಡುತ್ತಿದ್ದಾರೆ. ಕೇಂದ್ರ ಸರ್ಕಾರ ಸಮರ್ಪಕವಾಗಿ ಗ್ಯಾಸ್ ಸಿಲಿಂಡರ್ಗಳ ವ್ಯವಸ್ಥೆ ಮಾಡಬೇಕು’ ಎಂದು ಆಗ್ರಹಿಸಿದರು.

‘ಸಚಿವರು ಮೊದಲು ಸೌದೆ ಒಲೆಯಲ್ಲಿ ಅಡುಗೆ ಮಾಡಿದರೆ ಜನರ ಕಷ್ಟ ಅರಿವಾಗುತ್ತದೆ. ಸಮಸ್ಯೆ ಬಗೆಹರಿಸದಿದ್ದರೆ ಸಿಎಂ ಸಿದ್ದರಾಮಯ್ಯ ಮನೆಗೆ ನುಗ್ಗುತ್ತೇನೆ. ಇಡೀ ರಾಜ್ಯದಲ್ಲಿ ಆಟೊ ಚಾಲಕರು ನೋವು ಪಡುತ್ತಿದ್ದಾರೆ. ಈ ಚಾಲಕರಿಗೆ ಪ್ರತಿ ತಿಂಗಳು ₹15 ಸಾವಿರ ಕೊಡಿ. 15 ದಿನದೊಳಗೆ ಸಮಸ್ಯೆ ಬಗೆಹರಿಸದಿದ್ದರೆ ಕರ್ನಾಟಕ ಬಂದ್ ಮಾಡುತ್ತೇವೆ’ ಎಂದು ಎಚ್ಚರಿಕೆ ನೀಡಿದರು.

ಪಾರ್ಥಸಾರಥಿ, ಮೂಗೂರು ನಂಜುಂಡಸ್ವಾಮಿ, ತೇಜಸ್ ಲೋಕೇಶ್ಗೌಡ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260401-37-1006550420

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.