ಹುಣಸೂರು: ಮೈಸೂರು ಜಿಲ್ಲೆಯಲ್ಲಿ 7 ಲಕ್ಷ ಮತದಾರರ ಹೆಸರನ್ನು ಪಟ್ಟಿಯಿಂದ ಕೈ ಬಿಡಲಾಗಿದ್ದು , ಹುಣಸೂರು ಕ್ಷೇತ್ರದ 23 ಸಾವಿರ ಮತದಾರರೂ ಇದ್ದಾರೆ ಎಂದು ಮಾಜಿ ಶಾಸಕ ಎಚ್.ಪಿ.ಮಂಜುನಾಥ್ ಆತಂಕ ವ್ಯಕ್ತಪಡಿಸಿದರು.

ನಗರದ ಕಾಂಗ್ರೆಸ್ ಕಚೇರಿಯಲ್ಲಿ ಕ್ಷೇತ್ರದ ಬೂತ್ ಅಧ್ಯಕ್ಷರ ಸಭೆಯಲ್ಲಿ ಅವರು ಮಾತನಾಡಿದರು. ಕೇಂದ್ರ ಚುನಾವಣಾ ಆಯೋಗ ರಾಜ್ಯದಲ್ಲಿ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ(ಎಸ್ಐಆರ್) ಕಾರ್ಯ ನಡೆಸಿದೆ. ಕೇಂದ್ರ ಸರ್ಕಾರ , ಚುನಾವಣಾ ಆಯೋಗದ ಮೂಲಕ ತಮ್ಮ ಪಕ್ಷದ ವಿರುದ್ಧ ಧ್ವನಿ ಎತ್ತುವವರನ್ನು ಮತರಾರರ ಪಟ್ಟಿಯಿಂದಲೇ ಕಿತ್ತು ಹಾಕುವ ಹುನ್ನಾರ ನಡೆಸಿದೆ. ಬಿಜೆಪಿ ವಿರುದ್ಧ ಮಾತನಾಡುವ ಪರಿಶಿಷ್ಟ ಜಾತಿ, ಮುಸ್ಲಿಂ ಮತ್ತು ಕ್ರಿಶ್ಚಿಯನ್ ಸಮುದಾಯದವ ಹಕ್ಕುಗಳಿಗೆ ಕತ್ತರಿ ಹಾಕಿದೆ ಎಂದರು.

ಕಾಂಗ್ರೆಸ್ ಪಕ್ಷದ ಬೂತ್ ಹಂತದ ಕಾರ್ಯಕರ್ತರು ಈಗಿಂದಲೇ ಮತದಾರರ ಪಟ್ಟಿಯನ್ನು ಸೂಕ್ತ ದಾಖಲೆ ಸಮೇತವಾಗಿ ಪರಿಶೀಲಿಸಿ, ಯಾರ ಹೆಸರು ಕೈ ಬಿಟ್ಟಿದೆ ಎಂಬುದನ್ನು ಖಾತ್ರಿ ಪಡಿಸಿಕೊಂಡು ಸೂಕ್ತ ದಾಖಲೆ ನೀಡಿ ಮರು ಸೇರ್ಪಡೆಗೆ ಕ್ರಮವಹಿಸಿ ಎಂದರು.

ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಮಾತನಾಡಿ, ಕೇಂದ್ರ ಸರ್ಕಾರ ಅಲ್ಪಸಂಖ್ಯಾತರನ್ನು ಗುರಿಯಾಗಿಸಿ ಮತದಾರರ ಪಟ್ಟಿ ಪರಿಷ್ಕರಣೆ ನಡೆಸಲು ಚುನಾವಣಾ ಆಯೋಗಕ್ಕೆ ಸೂಚಿಸಿದೆ. ಪಂಚರಾಜ್ಯಗಳ ಚುನಾವಣೆಯಲ್ಲಿ ಮೂರು ರಾಜ್ಯಗಳಲ್ಲಿ ಬಿಜೆಪಿಗೆ ಮತದಾರ ಪಾಠ ಕಲಿಸಿದ್ದಾನೆ.ರಾಜ್ಯದಲ್ಲಿ ಮ್ಯಾಪಿಂಗ್ ಕಾರ್ಯ (ಪರಿಷ್ಕರಣೆ) ನಡೆದಿದ್ದು, ಮುಂದಿನ ಚುನಾವಣೆಯಲ್ಲಿ ಮತದಾರರು ತಕ್ಕ ಪಾಠ ಕಲಿಸಲಿದ್ದಾರೆ ಎಂದರು. ಮೈಸೂರು ಜಿಲ್ಲೆಯಲ್ಲಿ ಕೈಬಿಟ್ಟಿರುವ ಮತದಾರರ ಹೆಸರಿನ ಪಟ್ಟಿಯನ್ನು ಶೀಘ್ರವೇ ಬಿಡುಗಡೆ ಮಾಡಬೇಕು ಎಂದರು.

ಬಿಜೆಪಿ ಆಡಳಿತ ಅಗತ್ಯ ವಸ್ತುಗಳ ಬೆಲೆ ಏರಿಸಿ ನಾಗರಿಕರು ಬದುಕುವ ಆಸೆಯನ್ನು ಕಳೆದುಕೊಳ್ಳುವ ಪರಿಸ್ಥಿತಿ ನಿರ್ಮಾಣಗೊಂಡಿದೆ. ಕೇಂದ್ರ ಸರ್ಕಾರ ಹಾರಿಕೆ ಹೇಳಿಕೆ ನೀಡಿ ಜನರನ್ನು ದಿಕ್ಕು ತಪ್ಪಿಸಿದೆ ಎಂದರು.

ಕಾಂಗ್ರೆಸ್ ಕಾರ್ಯಾದ್ಯಕ್ಷ ಗದ್ದಿಗೆ ದೇವರಾಜ್, ಬ್ಲಾಕ್ ಅಧ್ಯಕ್ಷ ಪ್ರೇಮಕುಮಾರ್, ಬಾಲಸುಂದರ್, ಹುಡಾ ಅಧ್ಯಕ್ಷ ಎಚ್.ಪಿ.ಅಮರನಾಥ್, ಬೂತ್ ಅಧ್ಯಕ್ಷರು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260522-38-1930976903

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.