ಮೈಸೂರು: ‘ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯವನ್ನು ದೋಷ ರಹಿತವಾಗಿ ನಡೆಸಬೇಕು’ ಎಂದು ಜಂಟಿ ಮುಖ್ಯ ಚುನಾವಣಾಧಿಕಾರಿ ವಿ.ರಾಘವೇಂದ್ರ ಸೂಚಿಸಿದರು.

ನಗರದ ಜಿಲ್ಲಾ ಪಂಚಾಯಿತಿಯಲ್ಲಿ ಮೈಸೂರು ವಿಭಾಗ ಮಟ್ಟದ 8 ಜಿಲ್ಲೆಗಳ ಮತದಾರರ ನೋಂದಣಾಧಿಕಾರಿ, ಸಹಾಯಕ ನೋಂದಣಾಧಿಕಾರಿ, ಚುನಾವಣಾ ತಹಶೀಲ್ದಾರ್ ಮತ್ತು ಜಿಲ್ಲಾ ಟೆಕ್ನಿಕಲ್ ಪ್ರೊಗ್ರಾಮರ್ಗಳಿಗೆ ಬುಧವಾರ ಆಯೋಜಿಸಿದ್ದ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಕಾರ್ಯಾಗಾರದಲ್ಲಿ ಮಾತನಾಡಿದರು.

‘ಚುನಾವಣಾ ಆಯೋಗದ ಮಾರ್ಗಸೂಚಿ ಅನ್ವಯ ಪಟ್ಟಿ ಪರಿಷ್ಕರಣೆ ನಡೆಯಬೇಕು. ಯಾವೊಬ್ಬ ಅರ್ಹ ವ್ಯಕ್ತಿ ಮತದಾನ ಹಕ್ಕಿನಿಂದ ವಂಚಿತವಾಗಬಾರದು. ಎಸ್ಐಆರ್ ಜಾರಿಗೊಳಿಸಲು ಎಲ್ಲ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು’ ಎಂದರು.

‘ಚುನಾವಣಾ ನಿಯಮಾವಳಿಗಳನ್ನು ಉಲ್ಲಂಘಿಸಿದ ಅಧಿಕಾರಿಗಳನ್ನು ಅಮಾನತು ಮಾಡಿರುವ ಉದಾಹರಣೆ ಸಾಕಷ್ಟು ಬಾರಿಯಿದೆ. ಆದ್ದರಿಂದ ಜಾಗ್ರತೆಯಿಂದ ಕೆಲಸ ಮಾಡಿ’ ಎಂದು ತಾಕೀತು ಮಾಡಿದರು.

‘ಅರ್ಹ ಮತದಾರರ ಸೇರ್ಪಡೆ, ಅನರ್ಹರನ್ನು ಕೈ ಬಿಡುವ ಕೆಲಸ ಮಾಡಬೇಕು. ಗೈರು, ವಲಸೆ ಮತದಾರರ ಬಗ್ಗೆ ಪರಿಶೀಲಿಸಿ ಕ್ರಮವಹಿಸಬೇಕು. ಪರಿಷ್ಕರಣೆ ಪ್ರಕ್ರಿಯೆ, ಮತದಾರರ ನೋಂದಣಿ, ಹೆಸರು ತಿದ್ದುಪಡಿ, ವಿಳಾಸ ಬದಲಾವಣೆ, ಮೃತ ಮತ್ತು ನಕಲಿ ಮತದಾರರ ಹೆಸರು ಕೈ ಬಿಡುವ ವಿಧಾನ, ಆನ್ಲೈನ್ ಸೇವೆ ಬಳಕೆ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ತರಬೇತಿಯಲ್ಲಿ ತಿಳಿಸಿಕೊಡಲಾಗುವುದು’ ಎಂದರು.

ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಮತ್ತು ಅಧಿಕಾರಿಗಳು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260521-39-126913091

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.