ಮೈಸೂರು: ಜ್ಯೋತಿನಗರದ ಪೌರಕಾರ್ಮಿಕರ ಕಾಲೊನಿಯಲ್ಲಿ ಬಿಜೆಪಿಯಿಂದ ಎಸ್ಐಆರ್ ಕುರಿತು ಮಾಹಿತಿ ನೀಡಲು ಬಿಎಲ್ಎ–2 ಗಳ ಸಭೆ ನಡೆಯಿತು.

ಮಾಜಿ ಮೇಯರ್ ಸಂದೇಶ್ ಸ್ವಾಮಿ ಎಸ್ಐಆರ್ ಪ್ರಕ್ರಿಯೆಯ ಮಹತ್ವ ಹಾಗೂ ಮತದಾರರ ಪಟ್ಟಿಯ ಪರಿಷ್ಕರಣೆ ಕುರಿತು ವಿವರಿಸಿದರು.

‘25 ವರ್ಷಗಳ ನಂತರ ನಡೆಯುವ ಪ್ರಕ್ರಿಯೆಯ ಭಾಗವಾಗಿ ಚುನಾವಣಾ ಆಯೋಗವು ಈಗಾಗಲೇ ಮ್ಯಾಪಿಂಗ್ ಕಾರ್ಯವನ್ನು ಪೂರ್ಣಗೊಳಿಸಿದ್ದು, ಶೀಘ್ರದಲ್ಲೇ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಲಿದ್ದಾರೆ. ಪ್ರತಿ ನಾಗರಿಕರೂ ಭಾರತದಲ್ಲಿ ತಮ್ಮ ಹಕ್ಕನ್ನು ಉಳಿಸಿಕೊಳ್ಳಬೇಕಾದರೆ ಮತದಾನದ ಮಹತ್ವವನ್ನು ಅರಿತು, ಈ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಸಹಕರಿಸಬೇಕು’ ಎಂದು ತಿಳಿಸಿದರು.

ನರಸಿಂಹರಾಜ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಸ್ಮಾರ್ಟ್ ಮಂಜು, ಪ್ರಧಾನ ಕಾರ್ಯದರ್ಶಿ ಪದ್ಮನಾಭ ಹಾಗೂ ಮಂಜು, ಬಿಎಲ್ಎ– 1 ಎಚ್. ಜಿ. ಗಿರಿಧರ್, ನಗರ ಉಪಾಧ್ಯಕ್ಷ ಸು. ಮುರಳಿ, ಸಂಚಾಲಕ ಟಿ. ರಮೇಶ್, ವಾರ್ಡ್ ಅಧ್ಯಕ್ಷ ಶರತ್ ಹಾಗೂ ಸುಬ್ರಮಣಿ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-39-2112513721

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.