ಮೈಸೂರು: ‘ಕುಡಿಯುವ ನೀರು ಪೂರೈಕೆಯಲ್ಲಿ ಸಮಸ್ಯೆ ಎದುರಾಗದಂತೆ ನೋಡಿಕೊಳ್ಳಬೇಕು. ವಾರಕ್ಕೆ 2–3 ದಿನಗಳಿಗೆ ಒಮ್ಮೆಯಾದರೂ ಸರಬರಾಜು ಮಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು’ ಎಂದು ಶಾಸಕ ಜಿ.ಟಿ. ದೇವೇಗೌಡ ಸೂಚಿಸಿದರು.

ಇಲ್ಲಿನ ನಗರಪಾಲಿಕೆ ಸಭಾಂಗಣದಲ್ಲಿ ಗುರುವಾರ ಪಾಲಿಕೆ, ಹೂಟಗಳ್ಳಿ ನಗರಸಭೆ, ರಮ್ಮನಹಳ್ಳಿ, ಕಡಕೊಳ, ಬೋಗಾದಿ, ಶ್ರೀರಾಂಪುರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗಳು ಸೇರಿದಂತೆ ವಿವಿಧ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

‘ಹಳೆಯ ಉಂಡುವಾಡಿ ಯೋಜನೆ ಕಾಮಗಾರಿ ಮುಗಿಯುವವರೆಗೆ ಕಬಿನಿ, ಕೆಆರ್ಎಸ್, ಮೇಳಾಪುರ ಯೋಜನೆಯಡಿ ನೀರು ಒದಗಿಸಬೇಕು. ಎಲ್ಲೆಲ್ಲಿ ಸಮಸ್ಯೆ ಇದೆ ಎಂಬುದನ್ನು ಗುರುತಿಸಿ ಟ್ಯಾಂಕರ್ ಮೂಲಕವಾದರೂ ಪೂರೈಸಬೇಕು. ಪೈಪ್ಲೈನ್ ಒಡೆಯುವುದು ಸೇರಿದಂತೆ ಯಾವುದೇ ಸಮಸ್ಯೆಗಳಿದ್ದಲ್ಲಿ ಕೂಡಲೇ ಪರಿಹರಿಸಬೇಕು’ ಎಂದು ನಿರ್ದೇಶನ ನೀಡಿದರು.

‘ಶ್ರೀರಾಂಪುರ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಶ್ರೀನಗರದ ‘ಡಿ’ ಬ್ಲಾಕ್ನಲ್ಲಿ ಕೊಳವೆಬಾವಿಯಲ್ಲಿ ನೀರು ಬರುತ್ತಿಲ್ಲವೆಂದು ಸಾರ್ವಜನಿಕರು ದೂರು ನೀಡಿದ್ದಾರೆ. ಅಂತೆಯೇ ಶ್ರೀರಾಂಪುರ, ಬೋಗಾದಿ ಭಾಗಗಳಿಂದಲೂ ನೀರಿನ ಸಮಸ್ಯೆ ಕುರಿತು ದೂರು ಬರುತ್ತಿದೆ. ಇತ್ತ ಅಧಿಕಾರಿಗಳು ಗಮನಹರಿಸಬೇಕು. ತಕ್ಷಣವೇ ಕ್ರಮ ಕೈಗೊಳ್ಳಬೇಕು’ ಎಂದರು.

ಪುನಶ್ಚೇತನಕ್ಕೆ ಕ್ರಮ ವಹಿಸಿ: ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ್ ರೆಡ್ಡಿ ಮಾತನಾಡಿ, ‘ಮಳೆ ಅಭಾವದ ಬಗ್ಗೆ ಮುನ್ಸೂಚನೆ ಇದೆ. ಈಗ ಸಮಸ್ಯೆ ಎದುರಾಗದಿದ್ದರೂ ಜೂನ್, ಜುಲೈನಲ್ಲಿ ಸಮಸ್ಯೆ ಕಾಣಿಸಿಕೊಳ್ಳಬಹುದು. ಅದಕ್ಕಾಗಿ ಕೊಳವೆಬಾವಿಗಳನ್ನು ಕೊರೆಸಬೇಕು. ಬತ್ತಿ ಹೋಗಿರುವ ಕೊಳವೆಬಾವಿಗಳ ಪುನಶ್ಚೇತನಕ್ಕೆ ಕ್ರಮ ಕೈಗೊಳ್ಳಬೇಕು’ ಎಂದು ಹೇಳಿದರು.

‘ಅಗತ್ಯ ಟ್ಯಾಂಕರ್ಗಳ ಖರೀದಿಗೆ ಅನುಮೋದನೆ ನೀಡಲಾಗಿದೆ’ ಎಂದರು.

‘ಕಬಿನಿ ಯೋಜನೆಯಲ್ಲಿ 60 ಎಂಎಲ್ಡಿ ನೀರಿನಲ್ಲಿ 40 ಎಂಎಲ್ಡಿಯನ್ನು ನಗರಪಾಲಿಕೆಗೆ ಹಾಗೂ 20 ಎಂಎಲ್ಡಿಯನ್ನು ಸ್ಥಳೀಯ ಸಂಸ್ಥೆಗಳಿಗೆ ಹಂಚಿಕೆ ಮಾಡಿ ಒಪ್ಪಂದ ಆಗಿದೆ. ಆದ್ದರಿಂದ ಸ್ಥಳೀಯ ಸಂಸ್ಥೆಗಳಿಗೆ ಕೊಡಬೇಕಾದ ನೀರನ್ನು ಕೊಡಬೇಕು’ ಎಂದು ಹೇಳಿದರು.

ಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸೀಫ್, ಎಸ್ಇ ಮಂಜುನಾಥ್, ಹೂಟಗಳ್ಳಿ ನಗರಸಭೆ ಪೌರಾಯುಕ್ತ ಬಿ.ಎನ್.ಚಂದ್ರಶೇಖರ್, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗಳಾದಎಚ್.ಎಂ.ಸುರೇಶ್, ಸುಜಯ್, ಮಹೇಶ್, ಎಚ್.ಆರ್.ದೀಪಾ, ಕಾರ್ಯಪಾಲಕ ಎಂಜಿನಿಯರ್ಗಳಾದ ಮೊಹಮ್ಮದ್ ಆಸಿಫ್ ಇಕ್ಬಾಲ್, ಎ.ಎಂ. ಮೊಹಮ್ಮದ್ ಮುಸ್ತಫಾ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260411-39-544334685

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.