ಹುಣಸೂರು: ‘ಭಾರತದ ಪ್ರತಿಯೊಬ್ಬ ನಾಗರಿಕನ ಮೂಲಭೂತ ಕರ್ತವ್ಯದಲ್ಲಿ ಮೊದಲಿಗೆ ಅರಣ್ಯ, ಸರೋವರ, ನದಿಗಳು ಮತ್ತು ವನ್ಯಜೀವಿಗಳು ಸೇರಿದಂತೆ ನೈಸರ್ಗಿಕ ಪರಿಸರವನ್ನು ಸಂರಕ್ಷಿಸುವುದಕ್ಕೆ ಆದ್ಯತೆ ನೀಡಬೇಕು’ ಎಂದು ಔಟ್ರೀಚ್ ಸಂಸ್ಥೆಯ ತರಬೇತಿ ಸಂಯೋಜಕ ಜಿ.ಎಸ್. ಜಗದೀಶ ಸಲಹೆ ನೀಡಿದರು.

ತಾಲ್ಲೂಕಿನ ಹನಗೋಡು ಹೊಬಳಿಯ ಶೆಟ್ಟಹಳ್ಳಿ ಹಾಡಿ ಗಿರಿಜನ ಆಶ್ರಮ ಶಾಲೆಯಲ್ಲಿ ಬೆಂಗಳೂರಿನ ಆಚಾರ್ಯ ಪದವಿ ಅಧ್ಯಯನ ಸಂಸ್ಥೆ ಏರ್ಪಡಿಸಿದ್ದ ವಾರ್ಷಿಕ ಸಮಾಜ ಕಾರ್ಯ ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ‘ತ್ಯಾಜ್ಯ ನಿರ್ವಹಣೆ’ ವಿಷಯ ಕುರಿತು ಅವರು ಮಾತನಾಡಿದರು.

‘ನಾವು ಪ್ರತಿನಿತ್ಯ ತ್ಯಾಜ್ಯದ ಸಮಸ್ಯೆ ಎದುರಿಸುತ್ತಿದ್ದು, ಅದರಲ್ಲೂ ಪ್ಲಾಸ್ಟಿಕ್ ಹೆಮ್ಮರವಾಗಿ ಬೆಳೆಯ ಜೀವ ಸಂಕುಲಕ್ಕೆ ಮಾರಕವಾಗುತ್ತಿದೆ. ಪ್ಲಾಸ್ಟಿಕ್ಮುಕ್ತ ಮಾಡಬೇಕಾದರೆ ಯುವಕರು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿ ತ್ಯಾಜ್ಯ ನಿರ್ವಹಣೆಯಲ್ಲಿ ತೊಡಗಿಸಿಕೊಳ್ಳಬೇಕು’ ಎಂದರು.

‘ಘನ, ದ್ರವ, ಆಪಾಯಕಾರಿ, ವೈದ್ಯಕೀಯ ಕಿಟ್ ಹಾಗೂ ಇ-ವೆಸ್ಟ್ಗಳನ್ನು ಸಾಧ್ಯವಾದ ಮಟ್ಟಿಗೆ ಶುದ್ಧೀಕರಿಸಿ ಮರುಬಳಕೆ ಮಾಡಲಾಗುತ್ತಿದ್ದು, ಏಕಬಳಕೆಯ ಪ್ಲಾಸ್ಟಿಕ್ ನಿರ್ಮೂಲನೆಗೆ ರಸ್ತೆ, ಸಿಮೆಂಟ್, ಬ್ಯಾಗ್, ಜರ್ಕಿನ್ ಹಾಗೂ ಡೆಸ್ಕ್ ನಿರ್ಮಾಣ ಮಾಡಲಾಗುತ್ತಿದೆ’ ಎಂದರು.

‘ಪ್ರಕೃತಿದತ್ತವಾಗಿ ಬರುವ (ಆಹಾರ ಪದಾರ್ಥಗಳು, ತರಕಾರಿ ಇತ್ಯಾದಿ) ತ್ಯಾಜ್ಯವು ಯಾವ ಜೀವರಾಶಿಗೂ ತೊಂದರೆ ಅಗದಂತೆ ಮಣ್ಣಲ್ಲಿ ಮಣ್ಣಾಗಿ ಕರಗಿ ಗೊಬ್ಬರವಾಗುತ್ತದೆ. ಯಾವುದೇ ಕಾರಣಕ್ಕೂ ಯಾರಿಗೂ ತೊಂದರೆ ಅಗುವುದಿಲ್ಲ. ಮಾನವ ನಿರ್ಮಿತ ತ್ಯಾಜ್ಯವು ವಿಶ್ವದಾದ್ಯಂತ ದೊಡ್ಡ ಸಮಸ್ಯೆಯಾಗಿ ಪ್ರಕೃತಿ ಮತ್ತು ಸಕಾಲ ಜೀವರಾಶಿಗಳ ಮೇಲೆ ಮರಣಾಂತಿಕವಾಗಿ ತೊಂದರೆ ಉಂಟಾಗುತ್ತಿದೆ’ ಎಂದು ಹೇಳಿದರು.

‘ನಾವು ಸಾಧ್ಯವಾದಷ್ಟು ಪ್ಲಾಸ್ಟಿಕ್ ಹಾಗೂ ಅದರಿಂದ ಸಿದ್ಧಪಡಿಸಿದ ವಸ್ತುಗಳಿಂದ ದೂರವಿರಬೇಕು. ಮರುಬಳಕೆಯಾಗುವ ವಸ್ತುಗಳನ್ನು ಹೆಚ್ಚಾಗಿ ಬಳಸುವುದರ ಜೊತೆಗೆ ತ್ಯಾಜ್ಯ ನಿರ್ವಹಣೆ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಬೇಕು’ ಎಂದು ಹೇಳಿದರು.

ವಿದ್ಯಾರ್ಥಿಗಳು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಆಚಾರ್ಯ ಪದವಿ ಅಧ್ಯಯನ ಸಂಸ್ಥೆಯ ಪ್ರೊ. ಕುಮಾರಸ್ವಾಮಿ, ಮುಖ್ಯಸ್ಥರಾದ ಮರ್ಷಿದ್, ಔಟ್ರೀಚ್ ಸಂಸ್ಥೆಯ ಯೋಜನ ಸಮನ್ವಯಾಧಿಕಾರಿ ಪ್ರಶಾಂತ್ ಸಿ., ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಗಣಪತಿ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260506-38-782922671

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.