ಮೈಸೂರು: ಸಮಾಜ ಕಲ್ಯಾಣ ಇಲಾಖೆಯಿಂದ ಹಮ್ಮಿಕೊಂಡಿದ್ದ ರಾಜ್ಯ ಮಟ್ಟದ ಕ್ರೀಡೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಸ್ಪರ್ಧೆಯಲ್ಲಿ, ಮೈಸೂರು ಜಿಲ್ಲೆಯ ಅಧಿಕಾರಿಗಳು ಮತ್ತು ನೌಕರರು ಉತ್ತಮ ಪ್ರದರ್ಶನ ತೋರಿ ‘ಅತ್ಯುತ್ತಮ ಜಿಲ್ಲೆ’ ಎಂಬ ಟ್ರೋಫಿ ತಮ್ಮದಾಗಿಸಿಕೊಂಡಿದ್ದಾರೆ.

ನೌಕರರಲ್ಲಿ ಕ್ರೀಡಾ ಮನೋಭಾವ ಜಾಗೃತಗೊಳಿಸುವುದು ಹಾಗೂ ಅವರಿಗೆ ಮನರಂಜನೆ ನೀಡುವ ಉದ್ದೇಶದಿಂದ ಸಮಾಜ ಕಲ್ಯಾಣ ಸಚಿವರೂ ಆಗಿರುವ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಅವರು ಕ್ರೀಡಾಕೂಟ ಆಯೋಜನೆಗೆ ಸೂಚನೆ ನೀಡಿದ್ದರು. ಅದರಂತೆ, ಜಿಲ್ಲಾ, ವಿಭಾಗ ಹಾಗೂ ರಾಜ್ಯಮಟ್ಟದಲ್ಲಿ ನಡೆಸಲು ಅಗತ್ಯ ಅನುದಾನವನ್ನೂ ಒದಗಿಸಲಾಗಿತ್ತು. 2ನೇ ವರ್ಷದ ಸ್ಪರ್ಧೆ ಇದಾಗಿತ್ತು.

ಪ್ರತಿ ಜಿಲ್ಲಾ ಮಟ್ಟಕ್ಕೆ ತಲಾ ₹ 1 ಲಕ್ಷ, ವಿಭಾಗ ಮಟ್ಟಕ್ಕೆ ತಲಾ ₹ 5 ಲಕ್ಷ ಹಾಗೂ ರಾಜ್ಯ ಮಟ್ಟಕ್ಕೆ ₹ 50 ಲಕ್ಷ ಅನುದಾನ ಒದಗಿಸಲಾಗಿತ್ತು. ಅದರಲ್ಲಿ ಕ್ರೀಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದಿದ್ದವು. ಇಲಾಖೆಯ ನೌಕರರ ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಪೂರಕವಾಗುವಂತೆ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ನಡೆಸಲು ತೀರ್ಮಾನಿಸಿ ಕ್ರಮ ಕೈಗೊಳ್ಳಲಾಗಿತ್ತು.

ಎಲ್ಲಾ ಜಿಲ್ಲೆಗಳಲ್ಲಿ ಹಾಗೂ ವಿಭಾಗ ಮಟ್ಟದಲ್ಲಿ ಸ್ಪರ್ಧೆಗಳನ್ನು ನಡೆಸಲಾಯಿತು. ಮಾರ್ಚ್ 1ರಂದು ನಡೆದ ರಾಜ್ಯಮಟ್ಟದ ಕ್ರೀಡಾ ಮತ್ತು ಸಾಂಸ್ಕೃತಿಕ ಕೂಟದಲ್ಲಿ ಮೈಸೂರು ಅದ್ವಿತೀಯ ಸಾಧನೆ ತೋರಿ ಗಮನಸೆಳೆದಿದೆ. ನೌಕರರು ಹಲವು ಬಹುಮಾನಗಳನ್ನು ಗೆದ್ದುಕೊಂಡಿದ್ದಾರೆ.

ಸಾಧನೆ: ಕ್ರೀಡಾಕೂಟದ ವಿಭಾಗದಲ್ಲಿ ಗುಂಪು ಕ್ರೀಡೆಗಳಾದ ವಾಲಿಬಾಲ್, ಹೆಣ್ಣು ಮಕ್ಕಳಿಗೆ ಥ್ರೋಬಾಲ್, ಕ್ರಿಕೆಟ್, ಶಟಲ್ ಕಾಕ್ ಸ್ಪರ್ಧೆ ಹಮ್ಮಿಕೊಳ್ಳಲಾಗಿತ್ತು. ಅಂತೆಯೇ ಸಾಂಸ್ಕೃತಿಕ ಚಟುವಟಿಕೆಗಳ ವಿಭಾಗದಲ್ಲಿ ಭಾವಗೀತೆ, ಜನಪದ ಗೀತೆ, ಕಿರು ನಾಟಕ ಸ್ಪರ್ಧೆ ನಡೆಸಲಾಯಿತು.

ಇದರಲ್ಲಿ ಮೈಸೂರು ವಿಭಾಗ ಮಟ್ಟದ ಸ್ಪರ್ಧೆಯಲ್ಲಿ 8 ಜಿಲ್ಲೆಗಳು ಭಾಗವಹಿಸಿದ್ದವು. ಇವುಗಳ ಪೈಕಿ ಶಟಲ್ಕಾಕ್ ಹೊರತುಪಡಿಸಿ ಎಲ್ಲಾ ವಿಭಾಗಗಳಲ್ಲೂ ಮೈಸೂರು ಜಿಲ್ಲೆ ಪ್ರಥಮ ಸ್ಥಾನಗಳನ್ನು ಪಡೆದು ರಾಜ್ಯಮಟ್ಟಕ್ಕೆ ಪ್ರವೇಶ ಪಡೆದಿತ್ತು. ಗೆಲುವಿನ ಓಟ ಮುಂದುವರಿಸಿದ ಮೈಸೂರಿನ ನೌಕರರು ರಾಜ್ಯ ಮಟ್ಟದಲ್ಲೂ ಉತ್ತಮ ಪ್ರದರ್ಶನ ತೋರಿದ್ದಾರೆ.

ಜನಪದ ಗೀತೆಯಲ್ಲಿ ದ್ವಿತೀಯ ಸ್ಥಾನ, ಭಾವಗೀತೆಯಲ್ಲಿ ದ್ವಿತೀಯ ಸ್ಥಾನ, ಕಿರುನಾಟಕ ಸ್ಪರ್ಧೆಯಲ್ಲಿ ಪ್ರಥಮ ಹಾಗೂ ಥ್ರೋಬಾಲ್ನಲ್ಲಿ ದ್ವಿತೀಯ ಸ್ಥಾನಗಳನ್ನು ಗಳಿಸಿದೆ. ಇಲಾಖೆಯ ಜಂಟಿ ನಿರ್ದೇಶಕ ಬಿ.ರಂಗೇಗೌಡ ಸಾರಥ್ಯದಲ್ಲಿ ರಾಜ್ಯಮಟ್ಟದಲ್ಲಿ ಉತ್ತಮ ಪ್ರದರ್ಶನ ನೀಡಿದ ನೌಕರರು, ಅತ್ಯುತ್ತಮ ಜಿಲ್ಲೆ ಟ್ರೋಪಿ ಗೆದ್ದುಕೊಂಡಿದ್ದಾರೆ. ಅವರನ್ನು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ. ಮಹದೇವಪ್ಪ ಅಭಿನಂದಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.