ಮೈಸೂರು: ವರದಕ್ಷಿಣೆ ಕಿರುಕುಳ ನೀಡಿ ಮಹಿಳೆ ಕೊಲೆ ಮಾಡಿದ ಪ್ರಕರಣದಲ್ಲಿ ನಗರದ ರಾಮಕೃಷ್ಣನಗರ ನಿವಾಸಿ ಚಿಕ್ಕಣ್ಣ ಹಾಗೂ ಕೃತ್ಯಕ್ಕೆ ಸಹಕರಿಸಿದ ಭರವ ಎಂಬಾತನಿಗೆ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ಆದೇಶಿಸಿದೆ.

‘ಚಿಕ್ಕಣ್ಣ ರೂಪಾ ಅವರನ್ನು 2ನೇ ಮದುವೆಯಾಗಿದ್ದರು. ಚಿಂದಿ ಪೇಪರ್ ವ್ಯಾಪಾರ ಮಾಡಿಕೊಂಡಿದ್ದ ಆತ ಅಲ್ಲಿನ ಮಳೆಯೊಬ್ಬರ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದು, ಇದನ್ನು ರೂಪಾ ಪ್ರಶ್ನೆ ಮಾಡುತ್ತಿದ್ದರು. ಈ ಕಾರಣ ದಂಪತಿ ನಡುವೆ ಆಗಾಗ ಜಗಳವಾಗುತ್ತಿತ್ತು. 2024ರ ಆ. 13ರಂದು ಅವರ ಮನೆಗೆ ಮಂಜುನಾಥ್ ಎಂಬುವವರು ಬಂದು ಹೋಗಿದ್ದರು. ಇದೇ ವಿಚಾರಕ್ಕೆ ಜಗಳ ಆರಂಭಿಸಿದ ಚಿಕ್ಕಣ್ಣ, ಸೀರೆಯಿಂದ ರೂಪಾ ಅವರ ಬಾಯಿ ಮತ್ತು ಕತ್ತನ್ನು ಬಿಗಿದು ಉಸಿರುಗಟ್ಟಿಸಿ ಸಾಯಿಸಿದ್ದ. ಬಳಿಕ ಭರವನೊಂದಿಗೆ ಸೇರಿ ಮೃತದೇಹವನ್ನು ನೇಣು ಹಾಕಿ, ಆತ್ಮಹತ್ಯೆಯಂತೆ ಬಿಂಬಿಸಿದ್ದ’ ಎಂದು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.

ಕುವೆಂಪುನಗರ ಪೊಲೀಸ್ ಠಾಣೆಯ ಅಂದಿನ ಇನ್ಸ್ಪೆಕ್ಟರ್ ಅರುಣ್ ಎಲ್. ಪ್ರಕರಣದ ತನಿಖೆ ನಡೆಸಿ, ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ನ್ಯಾಯಾಧೀಶೆ ರೂಪಾ ಕೆ.ಎನ್. ಅವರು ವಿಚಾರಣೆ ನಡೆಸಿ, ಆರೋಪ ಸಾಬೀತಾದ ಕಾರಣ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ, ಚಿಕ್ಕಣ್ಣನಿಗೆ ₹ 1.50 ಲಕ್ಷ ಮತ್ತು ಭರವಗೆ ₹ 1ಲಕ್ಷ ದಂಡ ವಿಧಿಸಿ ಆದೇಶಿಸಿದ್ದಾರೆ. ಎ.ಎನ್.ಮಧು ಸರ್ಕಾರದ ಪರ ವಾದ ಮಂಡಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260602-37-1439825581

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.