ಮೈಸೂರು: ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ ಸದಸ್ಯರು ಮಹಿಳೆಯರು ಮತ್ತು ಮಕ್ಕಳ ಮೇಲೆ ಹೆಚ್ಚುತ್ತಿರುವ ಅಪರಾಧಗಳ ವಿರುದ್ಧದ ರಾಜ್ಯವ್ಯಾಪಿ ಆಂದೋಲನದ ಭಾಗವಾಗಿ ಸಂಗ್ರಹಿಸಿದ ಸಹಿಯನ್ನು ಹಾಗೂ ಮನವಿ ಪತ್ರವನ್ನು ಎಡಿಸಿ ಶಿವರಾಜು ಅವರ ಮೂಲಕ ಮುಖ್ಯಮಂತ್ರಿಗೆ ಸಲ್ಲಿಸಿದರು.

‘ಉದ್ಯೋಗದ ಸ್ಥಳಗಳಲ್ಲಿ ಹಾಗೂ ಶಿಕ್ಷಣ ಸಂಸ್ಥೆಗಳಲ್ಲಿ ಮಹಿಳೆಯರ ಸಮಸ್ಯೆಗಳ ಪರಿಹಾರಕ್ಕಾಗಿ ಆಂತರಿಕ ದೂರು ಸಮಿತಿ ರಚಿಸಿ, ‘ಇವ ನಮ್ಮವ’ ಕಾಯ್ದೆ ಪರಿಣಾಮಕಾರಿಯಾಗಿಕಾರ್ಯನಿರ್ವಹಿಸುವಂತೆ ಕ್ರಮ ಕೈಗೊಳ್ಳಬೇಕು. ಬಾಲ್ಯ ವಿವಾಹ ತಡೆಗಟ್ಟಲು ಹೈಕೋರ್ಟ್ ನೀಡಿರುವ ನಿರ್ದೇಶನ ಕೂಡಲೇ ಅನುಷ್ಠಾನಗೊಳಿಸಿ’ ಎಂದು ಮನವಿ ಮಾಡಿದರು.

‘ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಕೈಬಿಡಿ, ಸರ್ಕಾರಿ ಶಾಲೆಗಳನ್ನು ಬಲಪಡಿಸಿ, ಹೆಣ್ಣುಮಕ್ಕಳಿಗೆ ಉಚಿತ ಶಿಕ್ಷಣ ನೀಡಿ. ಅಶ್ಲೀಲತೆಯ ಪ್ರಚಾರ, ಮದ್ಯ- ಮಾದಕ ವಸ್ತುಗಳ ಹಾವಳಿ ಸಂಪೂರ್ಣವಾಗಿ ತಡೆಗಟ್ಟಿ. ಫಾಸ್ಟ್ ಟ್ರ್ಯಾಕ್ ಕೋರ್ಟ್ಗಳಲ್ಲಿ ತ್ವರಿತವಾಗಿ ಪ್ರಕರಣ ಇತ್ಯರ್ಥಗೊಳಿಸಿ ಹಾಗೂ ಜಸ್ಟೀಸ್ ವರ್ಮಾ ಆಯೋಗದ ಶಿಫಾರಸು ಅನುಷ್ಠಾನಗೊಳಿಸಿ’ ಎಂದು ಹೇಳಿದರು.

ಸಂಘಟನೆಯ ಜಿಲ್ಲಾ ಸಮಿತಿ ಅಧ್ಯಕ್ಷೆ ನಳಿನಾ, ಸೀಮಾ, ಪುಷ್ಪಾ, ಪದ್ಮಾ ಮತ್ತು ಗಾಯತ್ರಿ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260328-39-987252192

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.