ಮೈಸೂರು: ‘ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳದಿಂದ ಅವರ ಆತ್ಮಗೌರವಕ್ಕೆ ಧಕ್ಕೆಯುಂಟಾಗುತ್ತಿದೆ. ಇದರಿಂದ ಮಾನಸಿಕ ಒತ್ತಡ ಹೆಚ್ಚುತ್ತಿದೆ’ ಎಂದು ಸಂಜೆ ಕಾಲೇಜಿನ ಕನ್ನಡ ವಿಭಾಗ ಮುಖ್ಯಸ್ಥೆ ಕೆ.ಸೌಭಾಗ್ಯವತಿ ತಿಳಿಸಿದರು.

ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಳಗವು ನಗರದಲ್ಲಿ ಮಂಗಳವಾರ ಆಯೋಜಿಸಿದ್ದ ಮಹಿಳಾದಿನಾಚರಣೆ ಮತ್ತು ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

‘ಕುಟುಂಬದೊಳಗಿನ ಕಲಹ, ಸಮಾಜದಲ್ಲಿನ ಶೋಷಣೆಯು ಮಹಿಳೆಯರ ಮಾನಸಿಕ ಹಾಗೂ ದೈಹಿಕ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿವೆ. ಸಣ್ಣ ವಿಷಯಗಳೇ ದೊಡ್ಡಸಮಸ್ಯೆಗಳಾಗಿ ಮಹಿಳೆಯರು ಅಸಹಾಯಕ ಸ್ಥಿತಿಗೆ ತಳ್ಳಲ್ಪಡುತ್ತಿದ್ದಾರೆ’ ಎಂದರು.

‘ಅನ್ಯಾಯ ಎದುರಾದಾಗ ಮೌನವಾಗಿರುವುದಕ್ಕಿಂತ ಧೈರ್ಯದಿಂದ ಎದುರಿಸುವ ಮನೋಭಾವ ಬೆಳೆಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.

ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ವೈದ್ಯೆ ಡಾ.ಪ್ರಿಯಾಂಕಾ ರವಿಕುಮಾರ್, ಸಮಾಜ ಸೇವಕಿ ಮಾಲಿನಿ ಫಾಲಾಕ್ಷ, ತೊಣಚಿಕೊಪ್ಪಲು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸವಿತಾಬಾಯಿ, ಆಟೊ ಚಾಲಕರ ಸಂಘದ ಅಧ್ಯಕ್ಷೆ ಸೌಮ್ಯಾ, ಪೌರಕಾರ್ಮಿಕರಾದ ಭವಾನಿ, ರಾಧಾ, ಬನ್ನಮ್ಮ, ಮಮತಾ, ದೇವಿ, ಕುಪ್ಪಮ್ಮ, ಲಕ್ಷ್ಮಿ ಅವರನ್ನು ಸನ್ಮಾನಿಸಲಾಯಿತು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪರಿವೀಕ್ಷಣಾಧಿಕಾರಿ ಕೆ.ಕೃಷ್ಣಕುಮಾರಿ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬೀರಿಹುಂಡಿ ಬಸವಣ್ಣ, ಮಾಜಿ ಪಾಲಿಕೆ ಸದಸ್ಯೆ ಪುಷ್ಪಲತಾ ಚಿಕ್ಕಣ್ಣ, ಸಂಘಟನೆಯ ಸಂಸ್ಥಾಪಕ ರಾಜ್ಯಾಧ್ಯಕ್ಷ ಎಂ.ಲಿಂಗರಾಜು, ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಕಮಲಾ ನಟರಾಜ್, ಚರಣ್ರಾಜ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260401-39-682105136

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.