ಮೈಸೂರು: ‘ಸಮಾಜದಲ್ಲಿ ಮಹಿಳೆಯರ ಸುರಕ್ಷತೆಯೇ ಅವರ ನಿಜವಾದ ಸ್ವಾತಂತ್ರ್ಯ’ ಎಂದು ಪ್ರಾಂಶುಪಾಲ ರೇಚಣ್ಣ ಹೇಳಿದರು.

ನಗರದ ಸರಸ್ವತಿಪುರಂನ ಜೆಎಸ್ಎಸ್ ಮಹಿಳಾ ಕಾಲೇಜಿನಲ್ಲಿ ‘ಪೋಷ್’ ಕೋಶದಿಂದ ಈಚೆಗೆ ಹಮ್ಮಿಕೊಂಡಿದ್ದ ಜಾಗೃತಿ ಕಾರ್ಯಕ್ರಮ ಹಾಗೂ ಆಶುಭಾಷಣ ಸ್ಪರ್ಧೆ ಉದ್ಘಾಟಿಸಿ ಅವರು ಮಾತನಾಡಿದರು.

‘ಮಹಿಳೆಯರ ಮೇಲಿನ ಅನ್ಯಾಯ, ದೌರ್ಜನ್ಯವನ್ನು ತಡೆಯುವುದು ಸಮಾಜದ ಪ್ರತಿಯೊಬ್ಬರ ಕರ್ತವ್ಯ. ಅವರ ಸುರಕ್ಷತೆ ಕೇವಲ ಕಾನೂನು ವಿಷಯವಲ್ಲ. ಅದು ಸಮಾಜದ ಜವಾಬ್ದಾರಿಯಾಗಿದೆ’ ಎಂದರು.

‘ವಿದ್ಯಾರ್ಥಿನಿಯರು ಹಕ್ಕುಗಳನ್ನು ಅರಿತು, ಜವಾಬ್ದಾರಿಯುತ ನಾಗರಿಕರಾಗಿ ರೂಪುಗೊಳ್ಳಬೇಕು. ಲೈಂಗಿಕ ಕಿರುಕುಳದ ವಿರುದ್ಧ ಜಾಗೃತಿ ಮೂಡಿಸುವ ಜೊತೆಗೆ, ಅದರ ತಡೆಗೆ ಅಗತ್ಯವಾದ ಕಾನೂನು ಅರಿವು ಹಾಗೂ ಆತ್ಮರಕ್ಷಣೆಯ ಮನೋಭಾವವನ್ನು ವಿದ್ಯಾರ್ಥಿನಿಯರಲ್ಲಿ ಬೆಳೆಸುವುದು ಇಂತಹ ಕಾರ್ಯಕ್ರಮಗಳ ಉದ್ದೇಶವಾಗಿದೆ’ ಎಂದು ತಿಳಿಸಿದರು.

ಜೈವಿಕ ತಂತ್ರಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಜಯಶ್ರೀ, ‘ಹೆಣ್ಣುಮಕ್ಕಳು ಅನ್ಯಾಯದ ವಿರುದ್ಧ ಧೈರ್ಯವಾಗಿ ಮಾತನಾಡಬೇಕು’ ಎಂದರು.

ಆಶುಭಾಷಣ ಸ್ಪರ್ಧೆಯಲ್ಲಿ ವಿದ್ಯಾರ್ಥಿನಿಯರು ‘ಮಹಿಳೆಯರ ಸುರಕ್ಷತೆ ಮತ್ತು ಗೌರವ’ಕ್ಕೆ ಸಂಬಂಧಿಸಿದ ವಿಷಯಗಳ ಬಗ್ಗೆ ಅಭಿಪ್ರಾಯಗಳನ್ನು ಮಂಡಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260413-39-718482154

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.