ಎಚ್.ಡಿ. ಕೋಟೆ: ಜನರಿಗೆ ಕಾಲಕ್ಕೆ ಅನುಗುಣವಾಗಿ ಆರೋಗ್ಯ ಮಾಹಿತಿ ನೀಡುವ ಉದ್ದೇಶದಿಂದ ಮತ್ತು ಜನರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಬೇಕೆಂಬ ಸದುದ್ದೇಶದಿಂದ ಈ ದಿನವನ್ನು ವಿಶ್ವ ಆರೋಗ್ಯ ದಿನವನ್ನಾಗಿ 1948ರಿಂದ ಆಚರಿಸಲಾಗುತ್ತಿದೆ ಎಂದು ಮೈಸೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ. ಗೋಪಿನಾಥ್ ತಿಳಿಸಿದರು.

ಪಟ್ಟಣದಲ್ಲಿ ವಿಶ್ವ ಆರೋಗ್ಯ ದಿನದ ಅಂಗವಾಗಿ ಮೈಸೂರಿನ ಹಾರ್ಟ್ ಸಂಸ್ಥೆ, ತಾಲ್ಲೂಕು ಆರೋಗ್ಯ ಅಧಿಕಾರಿಗಳ ಕಾರ್ಯಾಲಯದ ಸಹಯೋಗದಲ್ಲಿ ಮಂಗಳವಾರ ಆಯೋಜಿಸಿದ್ದ ಆರೋಗ್ಯ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ, ಆರೋಗ್ಯಕರ ಭವಿಷ್ಯಕ್ಕಾಗಿ ವಿಜ್ಞಾನದ ಜೊತೆ ನಾವೆಲ್ಲರೂ ನಿಲ್ಲಬೇಕು ಎಂದರು.

ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ. ಬೃಂದಾ ಮಾತನಾಡಿ, ಆರೋಗ್ಯ ಕಾಪಾಡಿಕೊಳ್ಳಲು ವಿಜ್ಞಾನದ ಸಹಕಾರ ಪಡೆದುಕೊಳ್ಳಬೇಕು. ಪ್ರತಿ ವರ್ಷ ವಿಶ್ವಸಂಸ್ಥೆ ಒಂದೊಂದು ಘೋಷವಾಕ್ಯವನ್ನು ಇಟ್ಟುಕೊಂಡು ಆರೋಗ್ಯ ದಿನ ಆಚರಣೆ ಮಾಡುತ್ತಿದೆ. ಬೇಸಿಗೆ ಸಮಯದಲ್ಲಿ ತುಂಬಾ ಆರೋಗ್ಯ ಸಮಸ್ಯೆಗಳು ಉಂಟಾಗುತ್ತವೆ. ಇದರ ಬಗ್ಗೆ ಸದಾ ಜಾಗೃತೆಯಿಂದ ಇರಬೇಕು ಎಂದರು.

ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಟಿ. ರವಿಕುಮಾರ್ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಮನುಷ್ಯನ ಜೀವನ ಶೈಲಿಯಲ್ಲಿ ಬದಲಾವಣೆ ಕಂಡುಬಂದಿದ್ದು, ತಿನ್ನುವ ಆಹಾರ, ತೊಡುವ ಬಟ್ಟೆ ಎಲ್ಲವು ಬದಲಾವಣೆಯಾಗಿದೆ. ಈ ವರ್ಷದ ಘೋಷವಾಕ್ಯ ‘ಆರೋಗ್ಯಕ್ಕಾಗಿ ಒಟ್ಟಾಗಿ ವಿಜ್ಞಾನದೊಂದಿಗೆ ನಿಲ್ಲು’ ಎಂಬ ಸಂದೇಶದೊಂದಿಗೆ ಗ್ರಾಮೀಣ ಭಾಗದಲ್ಲಿ ಜೀವನ ಶೈಲಿಯಲ್ಲಿ ಬದಲಾವಣೆ ತರಲು, ಸಮುದಾಯದಲ್ಲಿ ಜಾಗೃತಿಗೊಳಿಸಲು ಆರೋಗ್ಯ ಇಲಾಖೆ ಸದಾ ಕಾರ್ಯಾನ್ಮುಖವಾಗಬೇಕು ಎಂದರು.

ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಾದ ಶರತ್ ಎಚ್.ಎಸ್., ಡಾ.ಚಂದ್ರಕಲಾ, ಡಾ. ಹರ್ಷ, ಡಾ. ಕೀರ್ತಿ, ಡಾ. ಮನೋಹರ್, ಡಾ.ಪಾರ್ಥಸಾರಥಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260408-38-1974370627

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.