ಮೈಸೂರು: ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಜನ್ಮದಿನದ ಅಂಗವಾಗಿ ಮಂಗಳವಾರ ವಿವಿಧೆಡೆ ಕಾರ್ಯಕ್ರಮಗಳು ನಡೆದವು.

ಕೋಟೆ ಆಂಜನೇಯ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಯಿತು. ರಂಗೋಲಿ ಕಲಾವಿದ ಪುನೀತ್ ಮತ್ತು ತಂಡದವರು ರಂಗೋಲಿಯಲ್ಲಿ ಯದುವೀರ್ರ ಬೃಹತ್ ಭಾವಚಿತ್ರ ಬಿಡಿಸುವ ಮೂಲಕ ಗಮನ ಸೆಳೆದರು. ಸುಮಾರು 8300 ಚದರ ಅಡಿ ವಿಸ್ತೀರ್ಣದಲ್ಲಿ ಈ ವರ್ಣಮಯ ರಂಗೋಲಿ ಹರಡಿದ್ದು, ಪುನೀತ್, ಸಿ, ಲಕ್ಷ್ಮಿ, ರವಿಚಂದ್ರನ್, ಆರ್. ಹರ್ಷಿತ್ ಚಿತ್ರ ಬಿಡಿಸಿದರು.

ಕಾಡಾ ಕಚೇರಿ ಆವರಣದಲ್ಲಿ ಸಂಸದರ ಕಚೇರಿಯಲ್ಲಿ ನಡೆದ ರಕ್ತದಾನ ಶಿಬಿರದಲ್ಲಿ ಹತ್ತಾರು ಮಂದಿ ರಕ್ತದಾನ ಮಾಡಿದರು. ಬಿಜೆಪಿ ನಗರ ಘಟಕದ ಅಧ್ಯಕ್ಷ ಎಲ್.ನಾಗೇಂದ್ರ, ಗ್ರಾಮಾಂತರ ಅಧ್ಯಕ್ಷ ಕುಂಬ್ರಳ್ಳಿ ಸುಬ್ಬಣ್ಣ, ನಗರ ಪ್ರಧಾನ ಕಾರ್ಯದರ್ಶಿ ಸೋಮಸುಂದರ್, ಬಿ.ಎಂ. ರಘು, ರುದ್ರಮೂರ್ತಿ ಹಾಗೂ ಬಿಜೆಪಿ ಮುಖಂಡರು ಪಾಲ್ಗೊಂಡರು.

ಹಿನಕಲ್ನ ವಾತ್ಸಲ್ಯ ಸೇವಾಶ್ರಮದಲ್ಲಿ ವೃದ್ಧರಿಗೆ, ಹಿರಿಯರಿಗೆ ಭೋಜನ ಕೂಟ ಹಮ್ಮಿಕೊಳ್ಳಲಾಗಿತ್ತು. ಶ್ರೀನಿವಾಸ್, ಬಿಜೆಪಿ, ಚಾಮುಂಡೇಶ್ವರಿ ಕ್ಷೇತ್ರದ ಉಪಾಧ್ಯಕ್ಷ ಹಿನಕಲ್ ಗಣೇಶ್, ಹಿನಕಲ್ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಶಾಲಿನಿಕುಮಾರ್,ಪ್ರಧಾನ ಕಾರ್ಯದರ್ಶಿ ನಾರಾಯಣ್, ಮಹಿಳಾ ಮೋರ್ಚಾ ಅಧ್ಯಕ್ಷೆ ಸವಿತಾ ಗೌಡ ಪಾಲ್ಗೊಂಡರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260325-39-1874331960

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.