ಮೈಸೂರು: ಡಾ.ಯತೀಂದ್ರ ಸಿದ್ದರಾಮಯ್ಯ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ಹಾಗೂ ಪ್ರಮುಖ ಖಾತೆ ನೀಡುವಂತೆ ಕಾಂಗ್ರೆಸ್ ಹೈಕಮಾಂಡ್ ಒತ್ತಾಯಿಸಲು ಎಂದು ಕರ್ನಾಟಕ ಪ್ರದೇಶ ಕುರುಬ ಸಂಘದ ಮುಖಂಡರು ತೀರ್ಮಾನಿಸಿದರು.

ಇಲ್ಲಿ ಮಂಗಳವಾರ ನಡೆದ ಸಂಘದ ಸಭೆಯಲ್ಲಿ ಸಂಘದ ಮಾಜಿ ಅಧ್ಯಕ್ಷ ಬಿ. ಸುಬ್ರಹ್ಮಣ್ಯ ಮಾತನಾಡಿ, ‘ಯತಿಂದ್ರ ಸಿದ್ದರಾಮಯ್ಯ ಅವರಿಗೆ ಮೊದಲ ಹಂತದಲ್ಲೇ ಸೂಕ್ತ ಸ್ಥಾನಮಾನ ನೀಡಬೇಕು’ ಎಂದು ಒತ್ತಾಯಿಸಿದರು.

‘ಅಹಿಂದ ವರ್ಗಗಳನ್ನು ಮುನ್ನಡೆಸಲು ಯುವ ನಾಯಕನ ಅವಶ್ಯಕತೆ ಇದೆ. ಯತೀಂದ್ರ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಿದರೆ ಅವರು ಈ ಕಾರ್ಯವನ್ನು ಮಾಡುತ್ತಾರೆ. ಅವರಿಗೆ ಹೈಕಮಾಂಡ್ ಪ್ರಬಲ ಖಾತೆ ನೀಡಿ, ಉತ್ತಮ ಜನಸೇವೆಗೆ ಅವಕಾಶ ಮಾಡಿಕೊಡಬೇಕು’ ಎಂದರು.

‘ಕೊಟ್ಟ ಮಾತಿನಂತೆ ನಡೆದು ಸಿದ್ದರಾಮಯ್ಯ ಮಾದರಿಯಾಗಿದ್ದಾರೆ.ಅವರನ್ನು ಡಿ. ಕೆ. ಶಿವಕುಮಾರ್ ಅವರ ಸಂಪುಟ ಹಾಗೂ ಹೈಕಮಾಂಡ್ ಗೌರವಯುತವಾಗಿ ನಡೆಸಿಕೊಳ್ಳಬೇಕು. ಕುರುಬ ಸಮಾಜ ಸೇರಿದಂತೆ ಅಹಿಂದ ವರ್ಗದ ಶೇ 90ಕ್ಕಿಂತ ಹೆಚ್ಚು ಮತ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಪಕ್ಷಕ್ಕೆ ಬಿದ್ದಿವೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಯುವನಾಯಕ ಯತೀಂದ್ರ ಅವರಿಗೆ ಉತ್ತಮ ಸ್ಥಾನಮಾನ ನೀಡಬೇಕು’ ಎಂದು ಆಗ್ರಹಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-39-167646999

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.