ಮೈಸೂರು: ‘ಯಂಗ್ ಇಂಡಿಯನ್ಸ್ (ವೈಐ) ಮೈಸೂರು ಘಟಕವು ಇಲ್ಲಿನ ಜೆಎಸ್ಎಸ್ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಶನಿವಾರ ಎಸ್ಜೆಸಿಇ ಆವರಣದಲ್ಲಿ ಹಮ್ಮಿಕೊಂಡಿದ್ದ ‘ಯುವ ಉದ್ಯೋಗ ಮೇಳ– 2026’ ಯಶಸ್ವಿಯಾಯಿತು.

ಉದ್ಯೋಗಾಕಾಂಕ್ಷಿಗಳು ಹಾಗೂ ಉದ್ಯಮ ಸಂಸ್ಥೆಗಳಿಂದ ಉತ್ತಮ ಸ್ಪಂದನೆ ವ್ಯಕ್ತವಾಯಿತು. ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳ 55 ಪ್ರಮುಖ ಕಂಪನಿಗಳು ಭಾಗವಹಿಸಿದ್ದವು. ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ ಮತ್ತು ಕೊಡಗು ಜಿಲ್ಲೆಗಳ ಸಾವಿರಾರು ಅಭ್ಯರ್ಥಿಗಳು ಪಾಲ್ಗೊಂಡಿದ್ದರು.

ಎಂಜಿನಿಯರಿಂಗ್, ಎಂಬಿಎ, ವಾಣಿಜ್ಯ, ಕಲೆ, ಹಾಸ್ಪಿಟಾಲಿಟಿ, ಪ್ಯಾರಾಮೆಡಿಕಲ್ ಸೇರಿದಂತೆ ವಿವಿಧ ಡಿಪ್ಲೊಮಾ ಮತ್ತು ಐಟಿಐ ವಿದ್ಯಾರ್ಹತೆಯ ಅಭ್ಯರ್ಥಿಗಳು ಬಂದಿದ್ದರು. ಸ್ಥಳದಲ್ಲೇ ನಡೆದ ಸಂದರ್ಶನಗಳಲ್ಲಿ ಹಲವರು ಆಯ್ಕೆಯಾದರೆ, ಕೆಲವರು ಮುಂದಿನ ಹಂತಕ್ಕೆ ಅರ್ಹತೆ ಗಳಿಸಿದರು.

ಕುಲಪತಿ ಎ.ಎನ್. ಸಂತೋಷ್ಕುಮಾರ್, ಸಿಐಐ ಮೈಸೂರು ಅಧ್ಯಕ್ಷ ಉತ್ಸವ್ ಅಗರ್ವಾಲ್ ಅವರು, ವೈಐ ಮೈಸೂರು ಅಧ್ಯಕ್ಷೆ ಪ್ರಿಯಾಂಕಾ ಶ್ರೀಧರ್ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260428-39-1184873279

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.