ಮೈಸೂರು: ಅಲ್ಲಲ್ಲಿ ಹಕ್ಕಿಜ್ವರ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಇಲ್ಲಿನ ಚಾಮರಾಜೇಂದ್ರ ಮೃಗಾಲಯದಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಮೃಗಾಲಯ, ಕಾರಂಜಿ ಪ್ರಕೃತಿ ಉದ್ಯಾನ ಮತ್ತು ಕೂರ್ಗಳ್ಳಿಯ ಚಾಮುಂಡಿ ವನ್ಯಪ್ರಾಣಿಗಳ ಸಂರಕ್ಷಣಾ ಕೇಂದ್ರದಲ್ಲಿನ ಪ್ರಾಣಿ-ಪಕ್ಷಿಗಳಲ್ಲಿ ಹಕ್ಕಿಜ್ವರ ಸಾಂಕ್ರಾಮಿಕ ರೋಗದ ಹರಡುವಿಕೆಯನ್ನು ತಡೆಯಲು ಪ್ರವೇಶದ್ವಾರಗಳಲ್ಲಿ ಸೋಂಕು ನಿವಾರಕ ಔಷಧಿ ದ್ರವವನ್ನು ಸಿಂಪಡಿಸಲಾಗುತ್ತಿದೆ.

ಮೃಗಾಲಯಕ್ಕೆ ಪ್ರವೇಶಿಸುವ ಎಲ್ಲ ಸಿಬ್ಬಂದಿ, ಅಧಿಕಾರಿಗಳು, ಆಹಾರ ಮತ್ತು ಇತರೆ ಸಾಮಗ್ರಿಗಳನ್ನು ಸಾಗಿಸುವ ಯಾವುದೇ ವಾಹನಗಳು ಸೋಂಕು ನಿವಾರಕ ಔಷಧಿ ಸಿಂಪಡಿಸಿರುವ ಮಾರ್ಗದ ಮೂಲಕ ಹಾದುಹೋಗುವಂತೆ ವ್ಯವಸ್ಥೆ ಮಾಡಲಾಗಿದೆ. ಪ್ರತಿ ಪ್ರಾಣಿ ಆವರಣದಲ್ಲೂ ಪುಟ್ ಡಿಪ್ಗಳನ್ನು ಸೋಂಕುರಹಿತಗೊಳಿಸಲಾಗಿದೆ. ಪ್ರಾಣಿ-ಪಕ್ಷಿಗಳ ಮನೆಯಲ್ಲಿ ಕೆಲಸವನ್ನು ನಿರ್ವಹಿಸುವವರು ಸ್ಯಾನಿಟೈಸರ್ ಬಳಸುವಂತೆ ಸೂಚಿಸಲಾಗಿದೆ.

ಪಶುವೈದ್ಯರು ಪ್ರತಿ ಪ್ರಾಣಿ–ಪಕ್ಷಿಯ ಮೇಲ್ವಿಚಾರಣೆ ಮಾಡಿ ಸೂಕ್ತ ಕ್ರಮ ವಹಿಸಲಿದ್ದಾರೆ. ಕಾರಂಜಿ ಕೆರೆಯಲ್ಲಿ ಕೆಲಸ ಮಾಡುವ ಎಲ್ಲ ಸಿಬ್ಬಂದಿಗೆ ವಲಸೆ ಹಕ್ಕಿಗಳ ಸಾವು ಕಂಡುಬಂದರೆ ಕೂಡಲೇ ವರದಿ ಸಲ್ಲಿಸಲು ತಿಳಿಸಲಾಗಿದೆ.

ಮೃಗಾಲಯಕ್ಕೆ ತಂದ ಜೀವಂತ ಕೋಳಿಗಳನ್ನು ಪ್ರಾಣಿಗಳಿಗೆ ಆಹಾರವಾಗಿ ನೀಡುವ ಮುನ್ನ ವೈದ್ಯಕೀಯ ಪರೀಕ್ಷೆ, ಮಾಂಸದ ಸ್ವಚ್ಛತೆ ಸೇರಿದಂತೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಮೃಗಾಲಯದ ಸಿಬ್ಬಂದಿಯ ಆಂತರಿಕ ಸಂಚಾರಗಳನ್ನು ನಿಷೇಧಿಸಲಾಗಿದೆ.

ಪಶುವೈದ್ಯರು, ಪ್ರಯೋಗಾಲಯ ತಂತ್ರಜ್ಞರು ಮತ್ತು ನಾಲ್ವರು ಪ್ರಾಣಿ ಪಾಲಕರನ್ನು ಒಳಗೊಂಡ ಕ್ಷಿಪ್ರ ಪಡೆಯನ್ನು ರಚಿಸಿ ಸನ್ನದ್ಧವಾಗಿರಿಸಿಕೊಳ್ಳಲಾಗಿದೆ ಎಂದು ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕಿ ಪಿ. ಅನುಷಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-39-449855372

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.