ಶುಕ್ರವಾರ, 20 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ: ಸೀಮಾ ಮೊದಲ ಮಹಿಳಾ ನಿರ್ದೇಶಕಿ

Published : 16 ಆಗಸ್ಟ್ 2024, 15:13 IST
Last Updated : 16 ಆಗಸ್ಟ್ 2024, 15:13 IST
ಫಾಲೋ ಮಾಡಿ
Comments

ಮೈಸೂರು: ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಮೊದಲ ನಿರ್ದೇಶಕಿಯಾಗಿ ಪಿ.ಎ.ಸೀಮಾ ಅಧಿಕಾರ ಸ್ವೀಕರಿಸಿದ್ದಾರೆ.

ರಾಜ್ಯದ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ವನ್ಯಜೀವಿಗಳ ಸಾಂದ್ರತೆ ಹೆಚ್ಚಿರುವ ಖ್ಯಾತಿಯ ನಾಗರಹೊಳೆಗೆ ಇದೇ ಮೊದಲ ಬಾರಿ ಮಹಿಳಾ ಅಧಿಕಾರಿಯನ್ನು ಸರ್ಕಾರ ನಿಯೋಜಿಸಿದೆ. ಕೊಡಗು ಜಿಲ್ಲೆಯ ಪೊನ್ನಂಪೇಟೆಯ ಅವರು 2017ರ ಬ್ಯಾಚ್‌ನ ಐಎಫ್‌ಎಸ್‌ ಅಧಿಕಾರಿ. ಈ ಹಿಂದೆ ಮಡಿಕೇರಿ, ಮೈಸೂರು, ಮಂಡ್ಯ ಹಾಗೂ ಹುಣಸೂರು ಅರಣ್ಯ ವಿಭಾಗದಲ್ಲಿ ಡಿಸಿಎಫ್ ಆಗಿ ಸೇವೆ ಸಲ್ಲಿಸಿದ್ದರು.

ಆನೆ ಕಾರ್ಯಪಡೆ ಡಿಸಿಎಫ್ ಆಗಿದ್ದ ಅವರು, ಕೆ.ಆರ್.ನಗರದಲ್ಲಿ ಕಾಡಾನೆ ಹಿಮ್ಮೆಟ್ಟಿಸುವ ಕಾರ್ಯಾಚರಣೆ ಮೂಲಕ ಗಮನ ಸೆಳೆದಿದ್ದರು.

ಮೈಸೂರು ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಯಾಗಿ ಡಾ.ಮಾಲತಿ ಪ್ರಿಯಾ, ಬಿಳಿಗಿರಿ ರಂಗನಾಥ ಬೆಟ್ಟ ಹುಲಿ ಸಂರಕ್ಷಿತ ಪ್ರದೇಶದ ನಿರ್ದೇಶಕಿಯಾಗಿ ದೀಪಾ ಜೆ.ಕಂಟ್ರಾಕ್ಟರ್ ಸೇವೆ ಸಲ್ಲಿಸುತ್ತಿದ್ದಾರೆ. ಸೀಮಾ ಅವರೊಂದಿಗೆ ಮೈಸೂರು ಭಾಗದಲ್ಲಿ ಪ್ರಮುಖ ಹುದ್ದೆ ನಿಭಾಯಿಸುತ್ತಿರುವ ಮಹಿಳಾ ಅಧಿಕಾರಿಗಳ ಸಂಖ್ಯೆ ಮೂರಕ್ಕೇರಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT