ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರು | ಮೃಗಾಲಯದ ಸಿಂಹದ ಮರಿಗಳಿಗೆ ನಾಮಕರಣ ಮಾಡಿದ ಸಚಿವ ಈಶ್ವರ ಖಂಡ್ರೆ

‘ಕಬಿನಿ’, ‘ಸೂರ್ಯ’ ಹಾಗೂ ‘ಚಂದ್ರ’ ಎಂದು ಹೆಸರಿಟ್ಟ ಸಚಿವ ಖಂಡ್ರೆ
Published 17 ಜುಲೈ 2023, 6:00 IST
Last Updated 17 ಜುಲೈ 2023, 6:00 IST
ಅಕ್ಷರ ಗಾತ್ರ

ಮೈಸೂರು: ಇಲ್ಲಿನ ಚಾಮರಾಜೇಂದ್ರ ಮೃಗಾಲಯದಲ್ಲಿರುವ ಒಂದು ವರ್ಷದ ಮೂರು ಸಿಂಹದ ಮರಿಗಳಿಗೆ ನಾಮಕರಣ ಕಾರ್ಯಕ್ರಮ ಭಾನುವಾರ ನಡೆಯಿತು.

ಗಂಡು ಸಿಂಹ ‘ರಾಜು’ ಮತ್ತು ಹೆಣ್ಣು ಸಿಂಹ ‘ನಿರ್ಭಯಾ’ಳಿಗೆ ಜನಿಸಿದ (2022ರ ಜೂನ್‌ 5) ಒಂದು ಹೆಣ್ಣು ಹಾಗೂ 2 ಗಂಡು ಮರಿಗಳಿಗೆ ಕ್ರಮವಾಗಿ ‘ಕಬಿನಿ’, ‘ಸೂರ್ಯ’ ಹಾಗೂ ‘ಚಂದ್ರ’ ಎಂದು ಅರಣ್ಯ, ಜೀವವಿಜ್ಞಾನ ಮತ್ತು ಪರಿಸರ ಸಚಿವವೂ ಆಗಿರುವ ಕರ್ನಾಟಕ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ಈಶ್ವರ ಬಿ.ಖಂಡ್ರೆ ನಾಮಕರಣ ಮಾಡಿದರು.

ನಂತರ ಮಾತನಾಡಿದ ಅವರು, ‘ಮೃಗಾಲಯದಲ್ಲಿ ಎಲ್ಲಾ ಪ್ರಾಣಿಗಳನ್ನೂ ಸಿಬ್ಬಂದಿ ಬಹಳ ಚೆನ್ನಾಗಿ ಪೋಷಿಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಅಭಿವೃದ್ಧಿಪಡಿಸಲು ಅಗತ್ಯ ಕ್ರಮ ಕೈಗೊಳ್ಳುತ್ತೇವೆ’ ಎಂದರು.

ಹೆಚ್ಚುವರಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಕರ್ನಾಟಕ ಮೃಗಾಲಯ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಜಿ.ವಿ ರಂಗರಾವ್, ಹೆಚ್ಚುವರಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ವನ್ಯಜೀವಿ) ಕುಮಾರ್ ಪುಷ್ಕರ್, ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕ ಡಿ.ಮಹೇಶ್ ಕುಮಾರ್, ಉಪ ನಿರ್ದೇಶಕ ಎ.ಜೆ. ರೋಷಿಣಿ ಹಾಗೂ ಸಹಾಯಕ ನಿರ್ದೇಶಕ ಡಾ.ಜೆ.ಎಲ್. ಶ್ರೀನಿವಾಸ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT