ನಂಜನಗೂಡು: ‘ಬಿ.ಆರ್.ಅಂಬೇಡ್ಕರ್ ಅವರು ಬಲಿಷ್ಠ ಸಂವಿಧಾನದ ಮೂಲಕ ಶೋಷಿತ ಸಮುದಾಯಗಳಿಗೆ ರಕ್ಷಣೆ ನೀಡಿದ್ದಾರೆ, ನಾವೆಲ್ಲರೂ ಅವರು ತೋರಿದ ದಾರಿಯಲ್ಲಿ ಸಾಗಿದಾಗ ಮಾತ್ರ ಜಯಂತಿಗೆ ಅರ್ಥ ಬರುತ್ತದೆ’ ಎಂದು ಶಾಸಕ ದರ್ಶನ್ ಧ್ರುವನಾಯಾಯಣ ಹೇಳಿದರು.

ನಗರದ ಶ್ರೀಕಂಠೇಶ್ವರ ದೇವಾಲಯದ ದಾಸೋಹ ಭವನದ ಆವರಣದಲ್ಲಿ ಮಂಗಳವಾರ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿಯಿಂದ ಆಯೋಜಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು

‘ಉತ್ತಮ ಸಮಾಜ ನಿರ್ಮಾಣಕ್ಕೆ ಗುಣಮಟ್ಟದ ಶಿಕ್ಷಣ ಅತ್ಯಂತ ಅಗತ್ಯ, ಪೋಷಕರು ಮಕ್ಕಳಿಗೆ ಕೇವಲ ಪಠ್ಯ ವಿಷಯಗಳ ಶಿಕ್ಷಣ ನೀಡಿದರಷ್ಟೇ ಸಾಲದು, ಸಾಮಾಜಿಕ ಹಾಗೂ ರಾಜಕೀಯ ಅರಿವು ಮೂಡಿಸುವ ಶಿಕ್ಷಣ ನೀಡಬೇಕು. ದೇಶದ ಸಂವಿಧಾನದ ಬಗ್ಗೆ ತಿಳುವಳಿಕೆ ಇದ್ದಾಗ ಮಾತ್ರ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಅರ್ಥಮಾಡಿಕೊಳ್ಳಲು ಸಾಧ್ಯ’ ಎಂದು ಹೇಳಿದರು.

ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಮಾತನಾಡಿ, ‘ಸಂವಿಧಾನ ವಿರೋಧಿ ಧೋರಣೆಗಳು ಹೆಚ್ಚಾಗಿವೆ, ಇಂತಹ ಪ್ರವೃತ್ತಿಯನ್ನು ನಿಯಂತ್ರಿಸಲು ಜನರಲ್ಲಿ ಸಂವಿಧಾನದ ಬಗ್ಗೆ ಜಾಗೃತಿ ಮೂಡಿಸುವುದು ಅತ್ಯಗತ್ಯ. ಸಂವಿಧಾನ ರಕ್ಷಿಸುವ ನಿಟ್ಟಿನಲ್ಲಿ ಸಂವಿಧಾನದ ಮೌಲ್ಯಗಳನ್ನು ಉಳಿಸುವ ಹೊಣೆಗಾರಿಕೆ ಪ್ರತಿಯೊಬ್ಬ ನಾಗರಿಕರದ್ದಾಗಿದೆ’ ಎಂದು ಹೇಳಿದರು.

ಅಂಬೇಡ್ಕರ್ ಸಂಶೋಧನೆ ಮತ್ತು ವಿಸ್ತರಣಾ ಕೇಂದ್ರದ ಹಿರಿಯ ಪ್ರಾಧ್ಯಾಪಕ ಜಿ. ಸೋಮಶೇಖರ್ ಮಾತನಾಡಿದರು.

ಇದಕ್ಕೂ ಮುನ್ನ ನಗರದ ಜ್ಯೂನಿಯರ್ ಕಾಲೇಜು ಮೈದಾನದಿಂದ ಅಂಬೇಡ್ಕರ್ ಭಾವಚಿತ್ರವನ್ನು ವಿವಿಧ ಕಲಾತಂಡಗಳೊಂದಿಗೆ ಅದ್ದೂರಿಯಾಗಿ ಮೆರವಣಿಗೆ ನಡೆಸಲಾಯಿತು.

ಸಮಾರಂಭದಲ್ಲಿ ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ರಾಜ್ಯ ವಾಲ್ಮೀಕಿ ನಿಗಮದ ಮಾಜಿ ಅಧ್ಯಕ್ಷ ಎಸ್.ಸಿ.ಬಸವರಾಜು, ಮೃಗಾಲಯ ಪ್ರಾಧಿಕಾರ ಅಧ್ಯಕ್ಷ ಹಾಡ್ಯ ರಂಗಸ್ವಾಮಿ, ಗ್ಯಾರಂಟಿ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಮಾರುತಿ, ಮುಖಂಡರಾದ ಇಂಧನ ಬಾಬು, ತಾಲ್ಲೂಕು ಕಾಂಗ್ರೆಸ್ ಅಧ್ಯಕ್ಷ ಕುರಹಟ್ಟಿ ಮಹೇಶ್, ಶ್ರೀಕಂಠನಾಯಕ, ಸಿ.ಎಂ.ಶಂಕರ್, ಮುಖಂಡರಾದ ನಾಗೇಶ್ ರಾಜ್, ಉಪ್ಪಿಹನಳ್ಳಿ ಶಿವಣ್ಣ, ಕಳಲೆ ರಾಜೇಶ್ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260415-38-2134953548

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.