ನಂಜನಗೂಡು: ಇಲ್ಲಿನ ರೈಲ್ವೆ ಮೇಲ್ಸೇತುವೆ ಬಳಿ ಬೈಕ್ಗೆ ಹಿಂಬದಿಯಿಂದ ಲಾರಿ ಡಿಕ್ಕಿಯಾದ ಪರಿಣಾಮ ಪತ್ನಿ ಸ್ಥಳದಲ್ಲೇ ಸಾವಿಗೀಡಾಗಿ, ಪತಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ತಾಲ್ಲೂಕಿನ ಗೆಜ್ಜಗನಹಳ್ಳಿ ಗ್ರಾಮದ ರಾಣಿ (40) ಮತರು. ಪತಿ ನಾಗೇಂದ್ರ ತೀವ್ರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ದಂಪತಿಗೆ ಪುತ್ರ ಹಾಗೂ ಪುತ್ರಿ ಇದ್ದಾರೆ.

‘ಈ ದಂಪತಿ ಮೈಸೂರು-ಊಟಿ ಮುಖ್ಯ ರಸ್ತೆಯ ಎಂ.ಕೆ. ಕಲ್ಯಾಣಮಂಟಪದಲ್ಲಿ ಆರತಕ್ಷತೆ ಸಮಾರಂಭ ಮುಗಿಸಿ ಕಾರ್ಯನಿಮಿತ್ತ ಮೈಸೂರಿಗೆ ತೆರಳುತ್ತಿದ್ದಾಗ ಗುಂಡ್ಲುಪೇಟೆ ಕಡೆಯಿಂದ ಬಂದ ಲಾರಿ ಡಿಕ್ಕಿಯಾಗಿದೆ. ರಸ್ತೆಯ ಬಲ ಭಾಗಕ್ಕೆ ಬಿದ್ದ ರಾಣಿ ಅವರ ತಲೆಯ ಮೇಲೆ ಲಾರಿಯ ಚಕ್ರ ಹರಿದಿದೆ’ ಎಂದು ಪೊಲೀಸರು ಮಾಹಿತಿ ನೀಡಿದರು.

ಸ್ಥಳಕ್ಕೆ ನಂಜನಗೂಡು ಸಂಚಾರ ಠಾಣೆ ಪೊಲೀಸರು ಭೇಟಿ ನೀಡಿ, ಲಾರಿ ವಶಕ್ಕೆ ಪಡೆದಿದ್ದಾರೆ. ದೂರು ದಾಖಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260430-38-606536387

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.