ನಂಜನಗೂಡು: ಭಕ್ತರ ಸಹಕಾರವಿದ್ದರೆ ಮಠಗಳಿಂದ ಸಮಾಜಕ್ಕೆ ಹೆಚ್ಚಿನ ಕೊಡುಗೆ ನೀಡಲು ಸಾಧ್ಯ, ಈ ನಿಟ್ಟಿನಲ್ಲಿ ಮಲ್ಲನ ಮೂಲೆ ಮಠ ಯಶಸ್ವಿಯಾಗಿದ್ದು ಇದರ ಜವಾಬ್ದಾರಿ ಹೊತ್ತಿದ್ದ ಚನ್ನಬಸವ ಸ್ವಾಮೀಜಿಯವರು ತಮ್ಮ ಕೆಲಸವನ್ನು ಪ್ರಾಮಾಣಿಕವಾಗಿ ನಿಭಾಯಿಸಿದ್ದಾರೆ ಎಂದು ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ತಿಳಿಸಿದರು.

ತಾಲ್ಲೂಕಿನ ಮಲ್ಲನ ಮೂಲೆ ಕಂಬಳೀಶ್ವರ ಮಠದಲ್ಲಿ ಬುಧವಾರ ನಡೆದ ಚನ್ನಬಸವ ಸ್ವಾಮಿಗಳ ಸಂಸ್ಮರಣೆ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ಮಲ್ಲನ ಮೂಲೆ ಮಠದ ಚನ್ನಬಸವ ಸ್ವಾಮೀಜಿ ಸಮಾಜ ಹಾಗೂ ಮಠಕ್ಕೆ ಕೊಟ್ಟ ಕೊಡುಗೆಗಳು ಅವಿಸ್ಮರಣೆಯವಾಗಿದ್ದು, ಅವರ ಉತ್ತರಾಧಿಕಾರಿಯಾಗಿ ಆಯ್ಕೆಯಾಗಿರುವ ಇಮ್ಮಡಿ ಸಿದ್ಧಲಿಂಗ ಸ್ವಾಮೀಜಿ ಮುಂದಿನ ದಿನಗಳಲ್ಲಿ ಮಠವನ್ನು ಅಭಿವೃದ್ಧಿಪಡಿಸುವಲ್ಲಿ ಭಕ್ತರು ಸಂಪೂರ್ಣ ಸಹಕಾರ ಕೊಡಬೇಕಿದೆ.

ತುಮಕೂರು ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ ಮಾತನಾಡಿ, ಮಲ್ಲನ ಮೂಲೆ ಮಠದ ಚೆನ್ನ ಬಸವ ಸ್ವಾಮೀಜಿಯವರು ಮಠಕ್ಕೆ ಭಕ್ತರ ಪ್ರೀತಿ, ಶ್ರದ್ಧೆ ಹಾಗೂ ಭಕ್ತಿಯನ್ನು ಹರಿಯುವಂತೆ ನೋಡಿಕೊಂಡಿದ್ದರು ,ಹೀಗಾಗಿ ಸ್ವಾಮೀಜಿಯವರು ಭೌತಿಕವಾಗಿ ಮರೆಯಾಗಿದ್ದರೂ ಭಕ್ತರ ಮನಸ್ಸಿನಲ್ಲಿ ಸದಾ ಉಳಿಯಲಿದ್ದಾರೆ ಎಂದು ಹೇಳಿದರು.

ಮಾಜಿ ಶಾಸಕ ಬಿ.ಹರ್ಷವರ್ಧನ್ ಮಾತನಾಡಿ, ಮಲ್ಲನ ಮೂಲೆ ಮಠದ ಚನ್ನಬಸವ ಸ್ವಾಮೀಜಿ ಕಾಯಕ ಹಾಗೂ ದಾಸೋಹದ ಮಹತ್ವವನ್ನು ಸಮಾಜಕ್ಕೆ ತಿಳಿಸಿಕೊಡುವ ಜೊತೆಗೆ ಭಕ್ತರ ಸಂಕಷ್ಟಗಳನ್ನು ಪರಿಹರಿಸಲು ತಮ್ಮ ನೆರವನ್ನು ನೀಡುತ್ತಿದ್ದರು. ಮಠದ ನೂತನ ಪೀಠಾಧಿಪತಿಯಾಗಿರುವ ಇಮ್ಮಡಿ ಸಿದ್ದಲಿಂಗ ಸ್ವಾಮೀಜಿ ಸೇವಾ ಕಾರ್ಯಗಳನ್ನು ಕೈಗೊಳ್ಳಲು ನಾವೆಲ್ಲರೂ ಬೆಂಬಲವಾಗಿ ನಿಲ್ಲಬೇಕಿದೆ ಎಂದು ಹೇಳಿದರು.

ಸಭೆಯಲ್ಲಿ ನಿವೃತ್ತ ಪ್ರಾಧ್ಯಾಪಕ ಡಿ.ಎಸ್. ಸದಾಶಿವಮೂರ್ತಿ, ಗುರು ಕಂಬಳೀಶ್ವರ ಮಠದ ಇಮ್ಮಡಿ ಸಿದ್ಧಲಿಂಗ ಸ್ವಾಮೀಜಿ, ಮಲೆ ಮಹದೇಶ್ವರ ಬೆಟ್ಟದ ಸಾಲೂರು ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ, ಬೆಟ್ಟದಪುರದ ಚೆನ್ನಬಸವ ದೇಶಿಕೇಂದ್ರ ಸ್ವಾಮೀಜಿ, ದೇವನೂರು ಮಹಾಂತ ಸ್ವಾಮೀಜಿ, ಮಾಜಿ ಶಾಸಕರಾದ ಕಳಲೆ ಕೇಶವಮೂರ್ತಿ, ನಿರಂಜನ್ ಕುಮಾರ್, ರಾಜ್ಯ ಕಾಂಪೋಸ್ಟ್ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಎಸ್.ಮಹದೇವಯ್ಯ, ಪ್ರಥಮ ದರ್ಜೆ ಗುತ್ತಿಗೆದಾರ ಯು.ಎನ್.ಪದ್ಮನಾಭ ರಾವ್ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.