ನಂಜನಗೂಡು: ‘ಕಾಂಗ್ರೆಸ್ ಪಕ್ಷಕ್ಕಾಗಿ ಧ್ರುವನಾರಾಯಣ ಅವರು ಮಾಡಿರುವ ತ್ಯಾಗ, ಹೋರಾಟದ ಕೊಡುಗೆಯನ್ನು ಪರಿಗಣಿಸಿ ವರಿಷ್ಠರು ಪುತ್ರ ದರ್ಶನ್ ಧ್ರುವ ನಾರಾಯಣ ಅವರಿಗೆ ಸಚಿವ ಸ್ಥಾನ ನೀಡಬೇಕು’ ಎಂದು ತಾಲ್ಲೂಕು ಕಾಂಗ್ರೆಸ್ ಅಧ್ಯಕ್ಷ ಕುರಹಟ್ಟಿ ಮಹೇಶ್ ಆಗ್ರಹಿಸಿದರು.

‘ದರ್ಶನ್ ಅವರ ತಂದೆ ಧ್ರುವನಾರಾಯಣ ಅವರು ಕಾರ್ಯಾಧ್ಯಕ್ಷರಾಗಿ 9 ಜಿಲ್ಲೆಗಳ ಹೊಣೆಯನ್ನು ಹೊತ್ತು ಪಕ್ಷವನ್ನು ತಳಮಟ್ಟದಿಂದ ಸಂಘಟಿಸಿದ್ದರಿಂದ 9 ಜಿಲ್ಲೆಗಳಲ್ಲಿ ಅತೀ ಹೆಚ್ಚಿನ ಶಾಸಕರು ಕಾಂಗ್ರೆಸ್ನಿಂದ ಆಯ್ಕೆಯಾಗಿದ್ದರು. ಅವರ ಸೇವೆಯನ್ನು ಪರಿಗಣಿಸಿ ಅವರ ಪುತ್ರನಿಗೆ ಸಚಿವ ಸ್ಥಾನ ನೀಡಿದ್ದಲ್ಲಿ ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಗಳಲ್ಲಿ ಪಕ್ಷದ ಸಂಘಟನೆಗೆ ಹೆಚ್ಚಿನ ಸಹಾಯವಾಗಲಿದೆ’ ಎಂದು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ನಗರ ಕಾಂಗ್ರೆಸ್ ಅಧ್ಯಕ್ಷ ಸಿ.ಎಂ.ಶಂಕರ್ ಮಾತನಾಡಿ, ‘ರಾಜ್ಯದಲ್ಲಿ ನಾಲ್ಕರಿಂದ ಐದು ಬಾರಿ ಸಚಿವರಾದವರಿಗೆ ಮತ್ತೆ ಮಣೆ ಹಾಕಿದಲ್ಲಿ ಹೊಸ ನಾಯಕರು ಬೆಳೆಯುವುದು ಹೇಗೆ? ಹೊಸ ನಾಯಕರಿಗೆ ಅಧಿಕಾರ ಸಿಕ್ಕಲ್ಲಿ ರಾಜ್ಯದಲ್ಲಿ ಬೆಳೆಯಲು ಸಹಾಯವಾಗುತ್ತದೆ’ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಗ್ಯಾರಂಟಿ ಅನುಷ್ಠಾನ ಸಮಿತಿ ತಾಲ್ಲೂಕು ಘಟಕದ ಅಧ್ಯಕ್ಷ ಕೆ.ಮಾರುತಿ , ಶ್ರೀಕಂಠನಾಯಕ, ನಗರಸಭೆ ಮಾಜಿ ಅಧ್ಯಕ್ಷ ಶ್ರೀಕಂಠಸ್ವಾಮಿ, ಮುಖಂಡರಾದ ರಂಗದಾಸ್, ದೊರೆಸ್ವಾಮಿನಾಯಕ, ಅಬ್ದುಲ್ ಖಾದರ್, ಕರಳಪುರ ನಾಗರಾಜು, ಬದನವಾಳು ಸೋಮು, ಶ್ರೀನಿವಾಸ ಮೂರ್ತಿ, ಎನ್.ಎಂ.ಮಂಜುನಾಥ್, ಕಳಲೆ ರಾಜೇಶ್, ಉಪ್ಪಿನಹಳ್ಳಿ ಶಿವಣ್ಣ, ಯುವ ಕಾಂಗ್ರೆಸ್ ಅಧ್ಯಕ್ಷ ವಿಜಯ್ ಕುಮಾರ್, ಹೆಗ್ಗಡಹಳ್ಳಿ ಮಹೇಶ್, ಮಹೇಂದ್ರ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260602-38-678729038

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.